ಪ್ರಮಾಣ ವಚನ ಸ್ವೀಕರಿಸಿದ ಅಮಿತ್ ಶಾ, ಸ್ಮೃತಿ ಇರಾನಿ
ನವದೆಹಲಿ: ಗುಜರಾತ್ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಬಿಜೆಪಿ ನಾಯಕರಿಗೆ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಅಮಿತ್ ಶಾ ಗುಜರಾತ್ ವಿಧಾನಸಭೆಗೆ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅಮಿತ್ ಶಾ, ಇದೇ ಮೊದಲ ಬಾರಿ ಅವರು ರಾಜ್ಯಸಭೆ ಪ್ರವೇಶಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ ಗುಜರಾತ್ನಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನ ಅಹಮದ್ ಪಟೇಲ್ ಕೂಡ ಆಯ್ಕೆಯಾಗಿದ್ದರು. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಿಗೂ ಅಡ್ಡಮತದಾನದ ಬಿಸಿ ತಟ್ಟಿತ್ತು. ಚುನಾವಣಾ ಆಯೋಗದ ಮೆಟ್ಟಿಲೇರಿದ್ದ ಕಾಂಗ್ರೆಸ್, ಅಹಮದ್ ಪಟೇಲ್ ಗೆಲುವನ್ನು ಖಚಿತಪಡಿಸಿಕೊಂಡಿತ್ತು. ರಾಜ್ಯಸಭೆಯಲ್ಲಿ ಬಹುಮತದ ಕೊರತೆ ಎದುರಿಸುತ್ತಿರುವ ಬಿಜೆಪಿಗೆ ಅಮಿತ್ ಶಾ ಪ್ರವೇಶದಿಂದ ಬಲ ಬರುತ್ತದೆ ಎಂದು ನಿರೀಕ್ಷಿಸಲಾಗುತ್ತಿದೆ
Comments