ಬಿ.ಎಸ್ ಯಡಿಯೂರಪ್ಪಾ ಯಾವತ್ತಾದರೂ ನಿಜ ಹೇಳಿದ್ದಾರಾ?- ಸಿಎಂ ಪ್ರಶ್ನೆ

ಬೆಂಗಳೂರು: ಬಿಎಸ್ ವೈ ಯಡಿಯೂರಪ್ಪ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಾಕ್ಷ್ಯನಾಶ ಮಾಡಲಾಗಿದೆ ಎಂದು ಬಿ.ಎಸ್ ಯಡಿಯೂರಪ್ಪ ಆರೋಪ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಯಡಿಯೂರಪ್ಪ ಯಾವತ್ತಾದರೂ ನಿಜ ಹೇಳಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿರುವ ಅವರು, ಸದ್ಯದಲ್ಲೇ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು. ಹೈಕಮಾಂಡ್ ಕೂಡ ವಿಸ್ತರಣೆಗೆ ಅನುಮತಿ ನೀಡಿದೆ ಎಂದರು. ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಾಕ್ಷ್ಯನಾಶ ಮಾಡಿರುವುದು ಸರ್ಕಾರದ ಹೊಣೆಗಾರಿಕೆ ಪ್ರಶ್ನೆ, ಸಿಎಂ ಸಿದ್ದರಾಮಯ್ಯ ಅವರೇ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಒತ್ತಾಯಿಸಿದರು.
Comments