ನವ ಕರ್ನಾಟಕ ನಿರ್ಮಾಣ ಆರಂಭ

27 Aug 2017 12:05 PM | Politics
205 Report

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಬಿಜೆಪಿ ನವಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ ಎಂಬ ರಥಯಾತ್ರೆ ಆಯೋಜಿಸಲು ತಿರ್ಮಾನ ಕೈಗೊಂಡಿದೆ. ದೆಹಲಿಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಯಾತ್ರೆಯ ರೂಪರೇಷೆಗಳು ಮತ್ತು ಹೊರಡುವ ದಿನಾಂಕದ ಕುರಿತು ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಿ ನಿರ್ಧರಿಸಲಾಗಿದೆ. ಇತ್ತೀಚೆಗೆ ರಾಜ್ಯಕ್ಕೆ ಆಗಮಿಸಿದ್ದ ಅಮಿತ್ ಶಾ ಅವರು ಪಕ್ಷ ಸಂಘಟನೆ ಮತ್ತು ಚುನಾವಣಾ  ಸಿದ್ದತೆಗಳ ಬಗ್ಗೆ ರಾಜ್ಯ ನಾಯಕರಿಗೆ ಹಲವು ಸೂಚನೆಗಳನ್ನು ನೀಡಿದ್ದು, ಇದನ್ನು ಯಾವ ರೀತಿ ಅನುಷ್ಠಾನಗೊಳಿಸಬೇಕು ಎಂಬ ಬಗ್ಗೆ ಸಭೆಯಲ್ಲಿ ಹೆಚ್ಚಿನ ಚರ್ಚೆ ನಡೆದಿದೆ. ಪಕ್ಷ ಸಂಘಟನೆ ನಿಟ್ಟಿನಲ್ಲಿ ರಾಜ್ಯದಲ್ಲಿರುವ 57 ಸಾವಿರಕ್ಕೂ ಹೆಚ್ಚು ಬೂತ್
ಗಳಲ್ಲಿ 9 ಸದಸ್ಯರನ್ನೊಳಗೊಂಡ ಬೂತ್ ಕಮಿಟಿ ಯನ್ನು ಕಡ್ಡಾಯ ವಾಗಿ ರಚಿಸಬೇಕು. ಮಹಿಳೆಯರು, ಹಿಂದೂಳಿದ ವರ್ಗದವರು, ಪರಿಶಿಷ್ಟ ಜಾತಿ , ಪಂಗಡದವರು , ಹಿಂದುಳಿದವರು ಇರಬೇಕು ಎಂದು ಶಾ ಸೂಚನೆ ನೀಡಿದ್ದಾರೆ.

ಪಕ್ಷದ ಸಿಎಂ ಅಭ್ಯರ್ಥಿ ಹಾಗೂ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ಈ ಯಾತ್ರೆ ತೆರಳಲಿದೆ. ನವ ಕರ್ನಾಟಕಕ್ಕೆ ಬಿಜೆಪಿಯ ಸಂಕಲ್ಪಗಳೇನು ಮತ್ತು ಪ್ರಸ್ತುತ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಜನ ವಿರೋಧಿ ಆಡಳಿತದ ಬಗ್ಗೆ ಜನರಿಗೆ ತಿಳಿಸುವ ಉದ್ದೇಶದಿಂದ ಈ ಯಾತ್ರೆ ಹಮ್ಮಿಕೊಳ್ಳಲಾಗಿದೆ.

Edited By

venki swamy

Reported By

Sudha Ujja

Comments