ಕಾಂಗ್ರೆಸ್ ಮುಖಂಡ ವರಪ್ರಸಾದ್ ರೆಡ್ಡಿ ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ಕಾಂಗ್ರೆಸ್ ಮುಖಂಡ ವರ ಪ್ರಸಾದ್ ರೆಡ್ಡಿ ಅವರು ಭಾನುವಾರ ಬಿಜೆಪಿಗೆ ಸೇರ್ಪಡೆಗೊಂಡರು. ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು. ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಮುಖಂಡ ವರ ಪ್ರಸಾದ್ ರೆಡ್ಡಿ ಅವರು ಭಾನುವಾರ ಬಿಜೆಪಿಗೆ ಸೇರ್ಪಡೆಗೊಂಡರು. ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು. ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ. ಈ ವೇಳೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ , ಎಸ್ ರವಿಕುಮಾರ್, ಭಾರತಿ ಶೆಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.
ಕೆಪಿಸಿಸಿ ಕಾರ್ಯದರ್ಶಿ , ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರ ಕಟ್ಟಾ ಬೆಂಬಲಿಗರಾಗಿರುವ ವರಪ್ರಸಾದ್ ರೆಡ್ಡಿ ಬಿಬಿಎಂಪಿ ಚುನಾವಣೆಯಲ್ಲಿ ಉತ್ತರಹಳ್ಳಿ ವಾರ್ಡ್ ನಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು.ವರಪ್ರಸಾದ್ ರೆಡ್ಡಿ ಉತ್ತರಳ್ಳಿ ವಾರ್ಡ್ ನಿಂದ ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. 2017ರಲ್ಲಿ ವರಪ್ರಸಾದ್ ರೆಡ್ಡಿ ನಿವಾಸದ ಮೇಲೂ ಐಟಿ ದಾಳಿ ನಡೆದಿತ್ತು. ಆ ವೇಳೆ 1.15 ಕೋಟಿ ರೂಪಾಯಿ ಪತ್ತೆಯಾಗಿತ್ತು.
Comments