ಸೋಮಾರಿಗಳಾದರೆ ನಿರ್ದಾಕ್ಷಿಣ್ಯ ಕ್ರಮ, ಹೊಸ ಪದಾಧಿಕಾರಿಗಳಿಗೆ ಗೌಡರ ಎಚ್ಚರಿಕೆ
ಹೊಸದಾಗಿ ನೇಮಕವಾದ ಪದಾಧಿಕಾರಿಗಳು ಕೆಲಸ ಮಾಡದೆ ಸುಮ್ಮನೆ ಕೂತರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಎಚ್ಚರಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಹೆಚ್ಚು ಸ್ಥಾನ ಗೆಲ್ಲುವ ಹಿನ್ನೆಲೆಯಲ್ಲಿ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅವರು ಆಯಾ ಕ್ಷೇತ್ರದ ಪಕ್ಷ ಸಂಘಟನೆಗೆ ಒತ್ತು ಕೊಡಬೇಕು. ನಾಮಕಾವಸ್ಥೆಯಂತೆ ಪದಾಧಿಕಾರಿಗಳು ಸುಮ್ಮನೆ ಕೂರಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಗೌಡರು ಗುಡಿಗಿದ್ದಾರೆ.ಕಡಿಮೆ ನೀರಿನಲ್ಲಿ ಹೆಚ್ಚು ಬೆಳೆ ಬೆಳೆಯಲು, ಮಾರುಕಟ್ಟೆ ಸೇರಿದಂತೆ ಇನ್ನಿತರೆ ವಿಷಯಗಳ ಬಗ್ಗೆ ಅಧ್ಯಯನ ನಡೆಸಲು ಕುಮಾರಸ್ವಾಮಿ ಇಸ್ರೇಲ್ ಪ್ರವಾಸ ಕೈಗೊಂಡಿದ್ದಾರೆ ಎಂದು ತಿಳಿಸಿದರು.
ವಿಶ್ವನಾಥ್‍ಗೆ ಪ್ರಚಾರ ಸಮಿತಿ ಹೊಣೆ:
ಇತ್ತೀಚೆಗಷ್ಟೆ ಕಾಂಗ್ರೆಸ್ ತೊರೆದು ಜೆಡಿಎಸ್‍ಗೆ ಸೇರ್ಪಡೆಯಾಗಿರುವ ಮಾಜಿ ಸಚಿವ ಎಚ್.ವಿಶ್ವನಾಥ್ ಅವರಿಗೆ ಪಕ್ಷದ ಪ್ರಚಾರ ಸಮಿತಿ, ಐಡಿಯಾಲಾಕ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಸಂಸದೀಯ ಕಾರ್ಯಮಂಡಳಿಯ ಅಧ್ಯಕ್ಷರಾಗಿ ಮಾಜಿ ಸಚಿವ ಬಂಡೆಪ್ಪ ಕಾಶ್ಯಂಪೂರ್, ರಾಜ್ಯ ಕಾನೂನು ಅಧ್ಯಕ್ಷರನ್ನಾಗಿ ವಕೀಲ ಎ.ಪಿ.ರಂಗನಾಥ್, ರಾಜ್ಯ ರಾಜಕೀಯ ವ್ಯವಹಾರ ಅಧ್ಯಕ್ಷರನ್ನಾಗಿ ಎಚ್.ಸಿ.ನೀರಾವರಿ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಅರ್ಷಿಯ ಅಲಿ, ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿ ಪ್ರಭಾವತಿ ಜಯರಾಂ, ಬೆಂಗಳೂರು ಸಿಟಿ ನಿರ್ವಹಣೆ ಸಮಿತಿ ಅಧ್ಯಕ್ಷರಾಗಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.
Comments