ಸಂಪುಟ ವಿಸ್ತರಣೆಗೆ ದಿನಾಂಕ ಫಿಕ್ಸ್, ಸಂಪುಟ ಸೇರುವವರು ಯಾರು ಗೂತ್ತಾ ?

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದೆ. ಮೂವರು ಶಾಸಕರು ಸೆಪ್ಟೆಂಬರ್ 1ರಂದು ಸಿದ್ದರಾಮಯ್ಯ ಸಂಪುಟ ಸೇರಲಿದ್ದಾರೆ.
ಸಂಪುಟದಲ್ಲಿ ಖಾಲಿ ಇರುವ ಮೂರು ಸ್ಥಾನಗಳನ್ನು ಭರ್ತಿ ಮಾಡಲು ಸಿದ್ದರಾಮಯ್ಯ ನಿರ್ಧರಿಸಿದ್ದರು. ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಒಪ್ಪಿಗೆ ಪಡೆದು ಬಂದಿದ್ದರು.ರಾಜ್ಯಪಾಲ ವಜುಭಾಯಿ ವಾಲಾ ಅವರು ನೂತನ ಸಚಿವರ ಪ್ರಮಾಣ ವಚನ ಸಮಾರಂಭಕ್ಕೆ ದಿನಾಂಕ ನಿಗದಿ ಮಾಡಿದ್ದು, ಸೆಪ್ಟೆಂಬರ್ 1ರಂದು ಮೂವರು ಶಾಸಕರು ಸಂಪುಟಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.
ಒಟ್ಟು ಮೂರು ಸಚಿವ ಸ್ಥಾನಗಳನ್ನು ಭರ್ತಿ ಮಾಡಬೇಕಿದೆ. ಸಚಿವ ಸಂಪುಟ ಸೇರಲು ಹಲವು ಶಾಸಕರು ಪ್ರಯತ್ನ ನಡೆಸಿದ್ದರು.ತಿಪಟೂರು ಕ್ಷೇತ್ರದ ಶಾಸಕ ಕೆ.ಷಡಕ್ಷರಿ ಸಿದ್ದರಾಮಯ್ಯ ಸಂಪುಟ ಸೇರಲಿದ್ದಾರೆ. ಲಿಂಗಾಯತ ಕೋಟಾದಡಿ ಕೆ.ಷಡಕ್ಷರಿ ಅವರನ್ನು ಆಯ್ಕೆ ಮಾಡಲಾಗಿದೆ.
ಮುಧೋಳ ಮೀಸಲು ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಸೋಲು ಅನುಭವಿಸಿದ ಆರ್.ಬಿ.ತಿಮ್ಮಾಪುರ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗಿತ್ತು. ದಲಿತ ಕೋಟಾದಡಿ ಅವರನ್ನು ಸಚಿವರನ್ನಾಗಿ ಮಾಡಲಾಗುತ್ತಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಪರಮಾಪ್ತರಾದ ಎಚ್.ಎಂ.ರೇವಣ್ಣ ಅವರು ಸಂಪುಟ ಸೇರಲಿದ್ದಾರೆ. ವಿಧಾನಪರಿಷತ್ ಸದಸ್ಯರಾದ ರೇವಣ್ಣ ಅವರನ್ನು ಕುರುಬ ಕೋಟಾದಡಿ ಸಚಿವರನ್ನಾಗಿ ಮಾಡಲಾಗುತ್ತಿದೆ.
Comments