ಬಿಎಸ್ ವೈ ಹೊಸ ಬಾಂಬ್...!!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅನಗತ್ಯವಾಗಿ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ನಾಡ ವಿರೋಧಿ ಹೇಳಿಕೆ ನೀಡಿರುವುದು ವಿಡಿಯೋ ಸಹಿತ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದರೂ ನಮ್ಮ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದರು. ಕನ್ನಡ ವಿರೋಧಿ ಧೋರಣೆ ತಳೆದಿರುವ ಲಕ್ಷ್ಮೀ ಹೆಂಬಾಳ್ಕರ್ ವಿರುದ್ಧ ಕಾಂಗ್ರೆಸ್ ಪ್ರಮುಖರು ಕ್ರಮ ಕೈಗೊಳ್ಳ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅನಗತ್ಯವಾಗಿ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ನಾಡ ವಿರೋಧಿ ಹೇಳಿಕೆ ನೀಡಿರುವುದು ವಿಡಿಯೋ ಸಹಿತ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದರೂ ನಮ್ಮ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದರು. ಕನ್ನಡ ವಿರೋಧಿ ಧೋರಣೆ ತಳೆದಿರುವ ಲಕ್ಷ್ಮೀ ಹೆಂಬಾಳ್ಕರ್ ವಿರುದ್ಧ ಕಾಂಗ್ರೆಸ್ ಪ್ರಮುಖರು ಕ್ರಮ ಕೈಗೊಳ್ಳಬೇಕು ಎಂದರು.
ಬೆಂಗಳೂರಿನಲ್ಲಿ ಸಚಿವರೊಬ್ಬರು ನಾಲ್ಕು ನೂರು ಎಕರೆಗೂ ಹೆಚ್ಚಿನ ಸರ್ಕಾರಿ ಜಮೀನು ಕಬಳಿಸಿ ಜನರನ್ನು ವಂಚಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಸಂಬಂಧ ಇಷ್ಟರಲ್ಲೇ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ. ಕಾಂಗ್ರೆಸ್ ಅವ್ಯವಹಾರ ಪ್ರಕರಣಗಳನ್ನು ಒಂದೊಂದಾಗಿ ಬಯಲಿಗೆಳೆಯುತ್ತೇವೆ ಎಂದು ಬಿಎಸ್ ವೈ ಹೊಸ ಬಾಂಬ್ ಸಿಡಿಸಿದ್ದಾರೆ.
ಗುಬ್ಬಿ ತಾಲೂಕು ಸೋಮ್ಲಾಪುರ ಕೆರೆಗೆ ಹಾರಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಯಡಿಯೂರಪ್ಪ ಆರೋಪಿಸಿದರು. ಘಟನೆ ಸಂಬಂಧ ಸರ್ಕಾರವನ್ನು ತರಾಟೆಗೆ ಸಮಕ್ಷಮದಲ್ಲೇ ರೈತ ಮುಳುಗುತ್ತಿದ್ದರೂ ರಕ್ಷಿಸುವ ಪ್ರಯತ್ನ ಮಾಡಿಲ್ಲ. ಅಧಿಕಾರಿಗಳ ನಿರ್ಲಕ್ಷವೇ ಘಟನೆಗೆ ಕಾರಣ, ಮೃತ ರೈತನ ಕುಟುಂಬಕ್ಕೆ ಸರ್ಕಾರ ತಕ್ಷಣ ಹತ್ತು ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
Comments