ಸಂಪುಟದಲ್ಲಿ ಲಿಂಗಾಯತ ಇಲ್ಲವೇ? ಬಿಜೆಪಿ ಸಂಸದ ಸುರೇಶ್ ಅಂಗಡಿ

ಬೆಳಗಾವಿ: ಕೇಂದ್ರ ಸಂಪುಟದಲ್ಲಿ ಪ್ರಬಲ ಸ್ಥಾನ ಆಕಾಂಕ್ಷಿಯಾಗಿದ್ದ ಬೆಳಗಾವಿ ಸಂಸದ ಸುರೇಶ್ ಅಂಗಡಿ ಅವರು ತಮಗೆ ಸಚಿವ ಸ್ಥಾನ ಕೈ ತಪ್ಪಿದಕ್ಕೆ ಬಿಜೆಪಿ ನಾಯಕರ ಮೇಲೆ ಅಸಮಾಧಾನ ಗೊಂಡಿದ್ದಾರೆ.
ಬೆಳಗಾವಿ: ಕೇಂದ್ರ ಸಂಪುಟದಲ್ಲಿ ಪ್ರಬಲ ಸ್ಥಾನ ಆಕಾಂಕ್ಷಿಯಾಗಿದ್ದ ಬೆಳಗಾವಿ ಸಂಸದ ಸುರೇಶ್ ಅಂಗಡಿ ಅವರು ತಮಗೆ ಸಚಿವ ಸ್ಥಾನ ಕೈ ತಪ್ಪಿದಕ್ಕೆ ಬಿಜೆಪಿ ನಾಯಕರ ಮೇಲೆ ಅಸಮಾಧಾನ ಗೊಂಡಿದ್ದಾರೆ. ರಾಜ್ಯ ನಾಯಕರು ಸ್ಪಷ್ಟವಾಗಿ ಮತ್ತು ಒಟ್ಟಾಗಿ ಹೇಳಿದ್ದರೆ ಉತ್ತರಕರ್ನಾಟಕ ಭಾಗದ ಒಬ್ಬರು ಸಚಿವರಾಗುತ್ತಿದ್ದರು, ಆದ್ರೆ ಈ ವಿಚಾರವನ್ನು ಅವರು ಪ್ರಸ್ತಾಪ ಮಾಡಲೇ ಇಲ್ಲ. ಇದರಿಂದ ಉತ್ತರಕರ್ನಾಟಕ ಭಾಗಕ್ಕೆ ಅನ್ಯಾಯವಾಗಿದೆ ಎಂದರು. ಪ್ರಸ್ತುತ ರಾಜ್ಯದಲ್ಲಿ ವೀರಶೈವ- ಲಿಂಗಾಯತ ವಿವಾದ ಉಂಟಾಗಿದ್ದು, ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಹೋರಾಟ ತೀವ್ರಗೊಳ್ಳುತ್ತಿದೆ.
ಇನ್ನೊಂದೆಡೆ ವೀರಶೈವ-ಲಿಂಗಾಯತ ಒಟ್ಟಾಗಿ ಇರಬೇಕು ಎಂಬ ಹೋರಾಟವು ಶುರುವಾಗಿದೆ. ಈ ಮಧ್ಯೆ ರಾಜ್ಯ ಕಾಂಗ್ರೆಸ್ ಸರ್ಕಾರ ಲಿಂಗಾಯತ ಪ್ರತ್ಯೇಕ ಧರ್ಮದ ಪರ ಇರುವುದರಿಂದ ಕಾಂಗ್ರೆಸ್ ಗೆ ತಿರುಗೇಟು ನೀಡಲು ಕೇಂದ್ರ ಸಂಪುಟದಲ್ಲಿ ಈ ಸಮುದಾಯದ ಒಬ್ಬರಿಗೆ ಸಚಿವ ಸ್ಥಾನ ಸಿಗಬಹುದು ಎಂದು ನಿರೀಕ್ಷಿಸಲಾಗಿತ್ತು.
ಸಂಪುಟದಲ್ಲಿ ಸ್ಥಾನ ಸೀಗುತ್ತೆ ಎಂದು ಸುರೇಶ್ ಅಂಗಡಿ ಹೆಸರು ಮುಂಚೂಣಿಯಲ್ಲಿತ್ತು. ಹಾವೇರಿ ಸಂಸದ ಶಿವಕುಮಾರ್ ಉದಾಸಿ ಅವರ ಹೆಸರುಗಳು ಕೇಳಿ ಬರುತ್ತಿತ್ತಾದರೂ ಸುರೇಶ್ ಅಂಗಡಿ ಹೆಸರು ಮೊದಲಿತ್ತು. ಅದೇ ರೀತಿ ಉತ್ತರ ಕರ್ನಾಟಕ ಭಾಗಕ್ಕೆ ಆದ್ಯತೆ ಸಿಗಬಹುದು ಎಂಬ ಕಾರಣಕ್ಕೆ ಹುಬ್ಬಳ್ಳಿ-ಧಾರವಾಡ ಸಂಸದ ಪ್ರಹ್ಲಾದ್ ಜೋಷಿ ಹೆಸರು ಕೇಳಿ ಬಂದಿತ್ತು. ಆದರೆ ಅಂತಿಮ ಕ್ಷಣದಲ್ಲಿ ಮೂವರು ಹೆಸರು ಪರಿಗಣಿಸದೇ ಅನಂತಕುಮಾರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಯ್ತು.
Comments