ಸಿಎಂ ವಿರುದ್ಧ CBI ತನಿಖೆಗೆ ಆಗ್ರಹ- ಅನುಪಮಾ ಶೆಣೈ

ಬೆಂಗಳೂರು: ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿರುವ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಯಾಗಲಿ ಎಂದು ಆಗ್ರಹಿಸಿದರು.
ಬೆಂಗಳೂರು: ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿರುವ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಯಾಗಲಿ ಎಂದು ಆಗ್ರಹಿಸಿದರು. ಸಿಎಂ ಸಿದ್ದರಾಮಯ್ಯ ಅವರು ದುಬಾರಿ ವಾಚ್ ಪ್ರಕರಣ, ಜೋಗ ಜಲಪಾತ ವ್ಯಾಪಾರೀಕರಣ ಮಾಡುತ್ತಿರುವುದು , ಉಡುಪಿಯ ಹಾಜಿ ಅಬ್ದುಲ್ಲಾ ಸರ್ಕಾರಿ ಆಸ್ಪತ್ರೆ ಖಾಸಗೀಕರಣ ಮಾಡುತ್ತಿರುವುದು ದೊಡ್ಡ ಭ್ರಷ್ಟಾಚಾರಗಳು, ಈ ಕುರಿತು ಸಿಬಿಐ ತನಿಖೆಗೆ ಕೋರಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಸಿಬಿಐ ತನಿಖೆ ನಡೆಯದಿದ್ದರೆ ಖಾಸಗಿ ದೂರು ಸಲ್ಲಿಸಿ ನ್ಯಾಯಾಂಗ ಹೋರಾಟ ಮಾಡುತ್ತೇನೆ ಎಂದರು.
ಇದೇ ವೇಳೆ ಸಚಿವರಾದ ಆರ್. ವಿ ದೇಶಾಪಾಂಡೆ, ಪ್ರಮೋದ್ ಮಧ್ವರಾಜ್, ಮಹದೇವ್ ಪ್ರಸಾದ್, ಐಎಎಸ್ ಅಧಿಕಾರಿ ದಂಪತಿಗಳಾದ ಶಾಲಿನಿ ರಜನೀಶ್ , ರಜನೀಶ್ ಗೋಯಲ್ ಮೇಲೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲು ಈ ವೇಳೆ ಆಗ್ರಹಿಸಿದರು.
Comments