ಮಂಗಳೂರಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕರು

07 Sep 2017 2:22 PM | Politics
396 Report

ಸಮಾಜಘಾತುಕರನ್ನು ರಕ್ಷಿಸಿ ನ್ಯಾಯಯುತ ಹೋರಾಟವನ್ನು ಹತ್ತಿಕ್ಕುವಂತಹ ಹಿಟ್ಲರ್ ಸಂಸ್ಕøತಿಯನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ನಡೆಸುತ್ತಿದೆ ಎಂದು ಬಿಜೆಪಿ ನಾಯಕರು ಇಂದಿಲ್ಲಿ ವಾಗ್ದಾಳಿ ನಡೆಸಿದ್ದಾರೆ.

 

ಮಂಗಳೂರು ಚಲೋ ಸಮಾವೇಶದಲ್ಲಿ ಬೈಕ್ ರ್ಯಾಲಿಗೂ ಮುನ್ನ ಇಲ್ಲಿನ ಜ್ಯೋತಿ ಸರ್ಕಲ್ ಬಳಿ ಜಮಾವಣೆಗೊಂಡಿದ್ದ ಸಾವಿರಾರು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿನಿಂದಲೇ ಕಾಂಗ್ರೆಸ್ ಸರ್ಕಾರವನ್ನು ರಾಜ್ಯದಿಂದ ಕಿತ್ತೊಗೆಯುವ ಸಂಕಲ್ಪ ತೊಡಿ ಎಂದು ಕಾರ್ಯಕರ್ತರಿಗೆ ಕರೆ ನೀಡಿ ರಣಕಹಳೆ ಮೊಳಗಿಸಿದ್ದಾರೆ.ಪೊಲೀಸರನ್ನು ಬಳಸಿಕೊಂಡು ಹೋರಾಟವನ್ನು ಹತ್ತಿಕ್ಕಲಾಗಿದೆ. ಇಲ್ಲ ಸಲ್ಲದ ಕಾನೂನುಗಳನ್ನು ತಂದು ದಬ್ಬಾಳಿಕೆ ಮಾಡಲಾಗಿದೆ. ನಿನ್ನೆ ನಡೆದ ಹೋರಾಟದಲ್ಲಿ ಕೆಲ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರನ್ನು ಥಳಿಸಲಾಗಿದೆ.

ಭ್ರಷ್ಟಾಚಾರ, ದ್ವೇಷದ ರಾಜಕಾರಣ ಮತ್ತು ಸಮಾಜವನ್ನು ಒಡೆಯುವಂತಹ ನೀತಿಯನ್ನು ಸರ್ಕಾರ ನಡೆಸುತ್ತಿದೆ. ರಾಜ್ಯದಲ್ಲಿ ಅಧಿಕಾರಿಗಳು, ಜನತೆ ಭಯದಿಂದ ಬದುಕುವಂತಹ ಪರಿಸ್ಥಿತಿ ಉದ್ಭವವಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಟೀಕಿಸಿದರು. ಇದೇ ವೇಳೆ ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಕರಾವಳಿ ಹಾಗೂ ರಾಜ್ಯದ ವಿವಿಧೆಡೆ ಸಂಘ ಪರಿವಾರದ ಕಾರ್ಯಕರ್ತರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಇದಕ್ಕೆ ಇಲ್ಲಿನ ಎಸ್‍ಡಿಪಿಐಆರ್, ಪಿಎಫ್‍ಐ ಸಂಘಟನೆಗಳು ಸಹಕಾರಿಯಾಗಿರುವುದು ಗೊತ್ತಿದ್ದರೂ ಅವುಗಳ ವಿರುದ್ಧ ಕ್ರಮ ಕೈಗೊಳ್ಳದೆ ನಿರ್ಲಕ್ಷಿಸಲಾಗುತ್ತಿದೆ.ರಾಜ್ಯ ಸಚಿವ ಸಂಪುಟದಲ್ಲಿ ಗಂಭೀರ ಆರೋಪಗಳನ್ನು ಹೊತ್ತಿರುವ ಈ ಸಂಘಟನೆಯ ಕಾರ್ಯಕರ್ತರ ಮೇಲಿದ್ದ ಕೇಸ್‍ಗಳನ್ನು ವಾಪಸ್ ಪಡೆಯಲಾಗಿದೆ. ಇದು ಕಾಂಗ್ರೆಸ್ ಸರ್ಕಾರ ಯಾವ ರೀತಿ ಜನರಿಗೆ ಭದ್ರತೆ ನೀಡುತ್ತಿದೆ ಎಂಬುದು ತೋರಿಸುತ್ತದೆ ಎಂದು ಟೀಕಿಸಿದರು.

Courtesy: eesanje

Comments