ಬಿಬಿಎಂಪಿ ಮೇಯರ್ ಚುನಾವಣೆ: ಎಚ್.ಡಿ.ದೇವೇಗೌಡರನ್ನು ಭೇಟಿಯಾದ ರಾಮಲಿಂಗಾ ರೆಡ್ಡಿ

ಬೆಂಗಳೂರು: ನೂತನ ಗೃಹ ಸಚಿವ ರಾಮಲಿಂಗಾ ರೆಡ್ಡಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿ(ಎಸ್) ಮೈತ್ರಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಈ ಭೇಟಿ ನಡೆದಿದೆ ಎನ್ನಲಾಗಿದೆ.
ಮಂಗಳವಾರ ಬೆಳಗ್ಗೆ ಪದ್ಮನಾಭನಗರದಲ್ಲಿನ ದೇವೇಗೌಡರ ನಿವಾಸಕ್ಕೆ ಆಗಮಿಸಿದ ರಾಮಲಿಂಗಾ ರೆಡ್ಡಿ ದೇವೇ ಗೌಡರೊಡನೆ ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಸೆ.28ಕ್ಕೆ ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ನಡೆಯಲಿದೆ. ಆದ್ದರಿಂದ, ಜೆಡಿಎಸ್ ನಾಯಕರ ಜೊತೆ ಮಾತುಕತೆ ನಡೆಸುವಂತೆ ಸಿದ್ದರಾಮಯ್ಯ ಸಚಿವರಿಗೆ ಸೂಚಿಸಿದ್ದರೆನ್ನಲಾಗಿದೆ.
ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದೆ. ಮೇಯರ್ ಮತ್ತು ಉಪ ಮೇಯರ್ ಪಟ್ಟವನ್ನು ಎರಡೂ ಪಕ್ಷಗಳು ಹಂಚಿಕೊಂಡಿವೆ. ಆದರೆ, ಈ ಬಾರಿ ಜೆಡಿಎಸ್ ಮೇಯರ್ ಪಟ್ಟಕ್ಕೆ ಪಟ್ಟು ಹಿ೯ಡಿದಿರುವ ಕಾರಣ ಈ ಚುನಾವಣೆ ಕುತೂಹಲ ಮೂಡಿಸಿದೆ.
ಇದೀಗ ರಾಮಲಿಂಗಾ ರೆಡ್ಡಿ ದೇವೇಗೌಡರನ್ನು ಭೇಟಿಯಾಗಿದ್ದು, ದೇವೇಗೌಡರಿಗೆ ಜಾತ್ಯಾತೀತ ಶಕ್ತಿಗಳ ಬಗ್ಗೆ ವಿಶ್ವಾಸವಿದೆ. ಅವರು ಮೈತ್ರಿ ತೊರೆಯಲಾರರು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Comments