ಮೇಯರ್ ಸೀಟ್ ಮೇಲೆ ಮಾಜಿ ಪ್ರಧಾನಿ ದೇವೆಗೌಡರ ಕಣ್ಣು!

13 Sep 2017 9:49 AM | Politics
847 Report

ಬೆಂಗಳೂರು: ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡಲು ದೇವೆಗೌಡರು ಒಲವು ತೋರಿದ್ದಾರೆ.

ಇದೇ ಸೆ.28 ರಂದು ಚುನಾವಣೆ ನಡೆಯಲಿದ್ದು, ಈ ಹಿಂದಿನಂತೆಯೆ ಕಾಂಗ್ರೆಸ್​ ಜೊತೆ ಮೈತ್ರಿ ಮುಂದುವರೆಸಲು ನಿರ್ಧರಿಸಿದ್ದಾರೆ. ಮೇಯರ್ ಪಟ್ಟವನ್ನು ಜೆಡಿಎಸ್​ಗೆ ನೀಡಬೇಕೆಂದು ಜೆಡಿಎಸ್ ಪಟ್ಟು ಹಿಡಿದಿದೆ.

ಒಂದು ವೇಳೆ ಮೇಯರ್ ಪಟ್ಟ ನೀಡದಿದ್ದರೆ, ಸ್ಥಾಯಿ ಸಮಿತಿ ಹುದ್ದೆಯಲ್ಲಿ ಹೆಚ್ಚಿನ ಅವಕಾಶವನ್ನು ಪಡೆದು ಕಾಂಗ್ರೆಸ್​ಗೆ ಬೆಂಬಲ ನೀಡಲು ನಿರ್ಧರಿಸಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿಗೆ ಬೆಂಬಲ ನೀಡಲು ದೇವೆಗೌಡರಿಗೆ ಮನಸ್ಸಿಲ್ಲ ಎಂದು ಹೇಳಲಾಗಿದೆ.

ಮುಂದಿನ ಸಾರ್ವತ್ರಿಕ ಚುನಾವಣೆ ಮೇಲೆ ಹೆಚ್ಚಿನ ಗಮನವನ್ನು ಕೇಂದ್ರಿಕರಿಸಿರುವ ದೇವೆಗೌಡರು, ಬಿಬಿಎಂಪಿಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಬಿಜೆಪಿಗೆ ಹೆಚ್ಚಿನ ಲಾಭ ಮಾಡಿಕೊಡಲು ಸಿದ್ದರಿಲ್ಲ. ಹೀಗಾಗಿ ಅಧಿಕಾರದಲ್ಲಿ ಹೆಚ್ಚಿನ ಸ್ಥಾನವನ್ನು ಪಡೆದು ಕಾಂಗ್ರೆಸ್​ನೊಂದಿಗೆ ಮುಂದುವರೆಯಲು ದೇವೆಗೌಡರು ನಿರ್ಧರಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Courtesy: vijayavani

Comments