ಬಿ.ಎಸ್. ವೈ ಗೆ ತಿರುಗೇಟು ನೀಡಿದ ಸಿಎಂ ಸಿದ್ದು
ಬಾಗಲಕೋಟೆಯಲ್ಲಿ ಮಾತನಾಡಿದ ಬಿ.ಎಸ್ ಯಡಿಯೂರಪ್ಪನವರು ಕಾಂಗ್ರೆಸ್ ಪಕ್ಷದ ಬಗ್ಗೆ ವಾಗ್ದಾಳಿ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಬಂಧುಗಳು ಮಾಡಿರುವ ಭ್ರಷ್ಟಾಚಾರದ ಕುರಿತಾಗಿ ನಾಲ್ಕೈದು ದಿನಗಳಲ್ಲಿ ಚಾರ್ಜ್ ಶೀಟ್ ನೀಡುವುದಾಗಿ ಆಕ್ರೋಶ ವ್ಯೆಕ್ತ ಪಡಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ಧರಾಮಯ್ಯ ನಮ್ಮ ಸರ್ಕಾರ ಇಲ್ಲವೆ ನನ್ನ ಕುಟುಂಬದವರು ಭ್ರಷ್ಟಾಚಾರ ನಡೆಸಿರುವ ದಾಖಲೆಗಳಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬಿಡುಗಡೆ ಮಾಡಲಿ. ಹಾದಿಬೀದಿಯಲ್ಲಿ ಈ ಬಗ್ಗೆ ಕೊಚ್ಚಿಕೊಳ್ಳುವುದು ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ನನ್ನ ಕುಟುಂಬ ಇಲ್ಲವೆ, ನಮ್ಮ ಸರ್ಕಾರದ ಸಚಿವರು, ಶಾಸಕರು ಸೇರಿದಂತೆ ಯಾರೇ ಆಗಲಿ ಭ್ರಷ್ಟಾಚಾರ ನಡೆಸಿರುವುದರ ಬಗ್ಗೆ ದಾಖಲೆಗಳಿದ್ದರೆ ಯಡಿಯೂರಪ್ಪ ಈವರೆಗೂ ಏಕೆ ಬಹಿರಂಗಪಡಿಸಿಲ್ಲ ಎಂದು ಪ್ರಶ್ನಿಸಿದರು?
Comments