ಸಿದ್ದರಾಮಯ್ಯ ಅವರು ಆಧುನಿಕ ಸಂಗೊಳ್ಳಿ ರಾಯಣ್ಣ ಇದ್ದಂತೆ : ಸುರೇಶ ಅಂಗಡಿ



ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಗರದಲ್ಲಿ ಮೇಲ್ದರ್ಜೆಗೆ ಏರಿಸಲಾಗಿರುವ ಸಾಂಬ್ರಾ ವಿಮಾನ ನಿಲ್ದಾಣ ಲೋಕಾರ್ಪಣ ಸಮಾರಂಭಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಸಂಸದ ಸುರೇಶ ಅಂಗಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಧುನಿಕ ಸಂಗೊಳ್ಳಿ ರಾಯಣ್ಣನಿಗೆ ಹೋಲಿಸಿ ಕೊಂಡಾಡಿದರು.
ಅಷ್ಟೇ ಅಲ್ಲದೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಣ್ಣನಾಗಿ ಕಿತ್ತೂರ ರಾಣಿ ಚೆನ್ನಮ್ಮರ ಹೆಸರು ಇಡಬೆಕೇಂದು ಆಗ್ರಹಿಸಿದರು. ಸಮಾರಂಭದಲ್ಲಿ ಕೇಂದ್ರ ವಿಮಾನಯಾನ ಸಚಿವ ಅಶೋಕ ಗಜಪತರಾಜು,ಕೇಂದ್ರ ಸಚಿವ ಅನಂತಕುಮಾರ್, ರಾಜ್ಯ ಸಚಿವರು ಹಾಗು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ, ಸಚಿವರಾದ ಡಿ ಕೆ ಶಿವಕುಮಾರ್, ಆರ್ ವಿ ದೇಶಪಾಂಡೆ, ರಾಜ್ಯ ಸಭಾ ಸದಸ್ಯರಾದ ಪ್ರಭಾಕರ್ ಕೋರೆ ಉಪಸ್ಥಿತರಿದ್ದರು.
Comments