ನಾವು ಯಾವ ನಾಯಕರನ್ನೂ ಕಡೆಗಣಿಸುತ್ತಿಲ್ಲ; ಡಿ.ಕೆ.ಸುರೇಶ್ ಆರೋಪಕ್ಕೆ ಸಿಎಂ ಉತ್ತರ

20 Sep 2017 3:35 PM | Politics
398 Report

ಪಕ್ಷದಲ್ಲಿ ನಮ್ಮನ್ನ ಕಡೆಗಣಿಸಲಾಗುತ್ತಿದೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪಕ್ಕೆ ಕೋಲಾರದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿಎಂ ಸಿದ್ದರಾಮಯ್ಯ, ನಾವು ಪಕ್ಷದಲ್ಲಿ ಯಾರನ್ನೂ ಕಡೆಗಣಿಸುತ್ತಿಲ್ಲ. ಬಿಬಿಎಂಪಿ ಮೇಯರ್ ಆಯ್ಕೆ ಹೈಕಮ್ಮಂಡ್ ನಿರ್ದೇಶನದಂತೆ ನಡೆಯಲಿದೆ ಎಂದು ಹೇಳಿದ್ದಾರೆ.

ಬಿಬಿಎಂಪಿಯಲ್ಲಿ ಜೆಡಿಎಸ್ ಜೊತೆ ಕಾಂಗ್ರೆಸ್ ಪಕ್ಷದ ಮೈತ್ರಿ ಮುಂದುವರೆಯಲಿದೆ. ಶಾಸಕರು, ಸಂಸದರು ಮೇಯರ್ ಅಭ್ಯರ್ಥಿಯ ಹೆಸರನ್ನ ಸೂಚಿಸಲಿದ್ದಾರೆ ಎಂದು ಡಿ.ಕೆ. ಸುರೇಶ್ ಆರೋಪವನ್ನ ಸಿಎಂ ಸಿದ್ದರಾಮಯ್ಯ ತಳ್ಳಿ ಹಾಕಿದ್ದಾರೆ. ಮೈತ್ರಿ ಬಗ್ಗೆ ಜೆಡಿಎಸ್ ವರಿಷ್ಠ ದೇವೇಗೌಡರ ಜೊತೆ ಗೃಹ ಸಚಿವ ರಾಮಲಿಂಗಾರೆಡ್ಡಿ ಮಾತುಕತೆ ನಡೆಸಿದ್ದಾರೆ ಎಂದು ಸಿಎಂ ಸ್ಪಷ್ಟಪಡಿಸಿದರು. ಅಧಿಕಾರ ವಿಷಯದಲ್ಲಿ ನಮ್ಮನ್ನ ಕಡೆಗಣಿಸಲಾಗುತ್ತಿದೆ ಎಂದು ಸುದ್ದಿಗೋಷ್ಠಿ ನಡೆಸಿ ಸಂಸದ ಡಿ.ಕೆ. ಸುರೇಶ್ ಅಸಮಾಧಾನ ಹೊರ ಹಾಕಿದ್ದರು.

ಈ ಮಧ್ಯೆ, ಬಿಬಿಎಂಪಿ ಮೇಯರ್ ಆಯ್ಕೆ ದಿನಾಂಕ ಸಮೀಪಿಸುತ್ತಿದ್ದಂತೆ ಕಾರ್ಪೊರೇಟರ್`ಗಳಲ್ಲೇ ಪೈಪೋಟಿ ಶುರುವಾಗಿದ್ದು, ಸಿಎಂ ಸಿದ್ದರಾಮಯ್ಯ ಜೊತೆ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಮಾತುಕತೆ ನಡೆಸಿದ್ದಾರೆ.  ಇದೇ 28ರಮದು ನೂತನ ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ. 

Courtesy: Webdunia

Comments