ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿರುದ್ಧ ನಮ್ಮ ಕಾನೂನು ಹೋರಾಟ ಮಂದುವರೆಯಲಿದೆ ಎಂದ ಸಿಎಂ

21 Sep 2017 3:47 PM | Politics
436 Report

ಮೈಸೂರು: ರಾಜ್ಯದ ರೈತರ ಹಿತಕಾಯಲು ಕರ್ನಾಟಕ ಸರ್ಕಾರ ಬದ್ಧವಾಗಿದ್ದು, ಈ ಹಿಂದಿನಂತೆಯೇ ಕಾವೇರಿ ನಿರ್ವಹಣಾ ಮಂಡಳಿಗೆ ನಮ್ಮ ವಿರೋಧ ಮುಂದುವರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ ಅವರು, ಸುಪ್ರೀಂ ಕೋರ್ಟ್ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಯಾಗಬೇಕು ಎಂದು ಹೇಳಿದೆಯಾದರೂ, ಸುಪ್ರೀಂಕೋರ್ಟ್ ಗೆ ಮಂಡಳಿ ರಚನೆ ಮಾಡಲು ಅಧಿಕಾರವಿಲ್ಲ. ಸಂಸತ್ತಿಗೆ ಮಾತ್ರ ಆ ಅಧಿಕಾರವಿದ್ದು, ಈ ಬಗ್ಗೆ ಈ ಹಿಂದೆ ಕೇಂದ್ರ ಸರ್ಕಾರವೇ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದೆ ಎಂದು ಹೇಳಿದರು.

 ಇದೇ ವೇಳೆ ಕಾವೇರಿ ನೀರು ನಿರ್ವಹಣಾ ಮಂಡಳಿ ರಾಜ್ಯದ ಪಾಲಿಗೆ ಕರಾಳ ಶಾಪವಾಗಲಿದ್ದು, ಇದೇ ಕಾರಣಕ್ಕೆ ನಾವು ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದೇವೆ. ಈ ಬಗ್ಗೆ ನಮ್ಮ ರಾಜ್ಯದ ವಕೀಲರನ್ನು  ನಾವು ಸಂಪರ್ಕಿಸಿದ್ದು, ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸುವಂತೆ ಸೂಚಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

 ಬಳಿಕ ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಸ್ಥಳಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಂದ ಕಾಮಗಾರಿಗಳ ಮಾಹಿತಿ ಪಡೆದರು.
 

Courtesy: Kannadaprabha

Comments