ಕೈ ಪಕ್ಷಕ್ಕೆ ಗುಡ್ ಬೈ ಹೇಳಿದ ನಾರಾಯಣ ರಾಣೆ

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಅವರು ಇದೀಗ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಶೀಘ್ರದಲ್ಲೇ ಬಿಜೆಪಿ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಕೊಂಕಣ ಪ್ರದೇಶದಲ್ಲಿ ಪ್ರಭಾವಿ ನಾಯಕರಾಗಿರುವ ನಾರಾಯಣ ರಾಣೆ ಅವರ ಬಿಜೆಪಿ ಸೇರ್ಪಡೆಗೆ ಶಿವಸೇನೆ ಅಡ್ಡಿಪಡಿಸುತ್ತಿದೆ.
ನಾರಾಯಣ ರಾಣೆ ಅವರು ಹಲವು ಬಾರಿ ತಾವು ಬಿಜೆಪಿ ಸೇರುವ ಸುಳಿವು ನೀಡಿದರೂ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಮಹಾರಾಷ್ಟ್ರ ಬಿಜೆಪಿಯಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಇಲ್ಲ. ಕಾಂಗ್ರೆಸ್ ತೊರೆದಿರುವ ರಾಣೆ ಅವರು ಮಹಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯಲ್ಲಿ ತಮ್ಮ ಇಬ್ಬರು ಮಕ್ಕಳಿಗೆ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ. ರಾಣೆ ಅವರನ್ನು 2005ರಲ್ಲಿ ಶಿವಸೇನೆಯಿಂದ ಉಚ್ಚಾಟಿಸಲಾಗಿತ್ತು. ಬಳಿಕ ಅವರು ಕಾಂಗ್ರೆಸ್ ಸೇರಿದ್ದರು. ಆದರೆ 2019ರ ಲೋಕಸಭೆ ಚುನಾವಣೆ ಗೆಲುವಿಗೆ ತಂತ್ರ ರೂಪಿಸುತ್ತಿರುವ ಅಮಿತ್ ಶಾ ಕಾಂಗ್ರೆಸ್ ನಾಯಕನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ.
Comments