ಮೋದಿಗೆ ಬರೆದ ಪತ್ರದಲ್ಲಿ ಸೋನಿಯಾ ಕೇಳಿಕೊಂಡಿದ್ದಾದರೂ ಏನು ?

ಲೋಕಸಭೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಹೊಂದಿರುವುದರಿಂದ ಇದರ ಲಾಭ ಪಡೆದುಕೊಂಡು ಮಹಿಳಾ ಮೀಸಲಾತಿ ಮಸೂದೆ ಅಂಗೀಕರಿಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಪ್ರಧಾನಿಗೆ ಬರೆದ ಪತ್ರದಲ್ಲಿ ಕೇಳಿಕೊಂಡಿದ್ದಾರೆ.
ಮಸೂದೆಯನ್ನು ಈಗಾಗಲೇ ಮಾರ್ಚ್ 9, 2010ರಲ್ಲಿ ರಾಜ್ಯಸಭೆಯಲ್ಲಿ ಅಂಗೀಕರಿಸಿದ್ದನ್ನು ನಾನು ತಮ್ಮ ಗಮನಕ್ಕೆ ತರಲು ಬಯಸುತ್ತೇನೆ. ಕಳೆದ 8 ವರ್ಷಗಳಿಂದ ಬಾಕಿ ಉಳಿದಿರುವ ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಬೇಕು ಎಂದು ಸೋನಿಯಾ ಪ್ರಧಾನಿಗೆ ಮನವಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಮಹಿಳಾ ಮೀಸಲಾತಿ ಮಸೂದೆಯನ್ನು ಯಾವತ್ತೂ ಬೆಂಬಲಿಸುತ್ತದೆ ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ. ಮಹಿಳಾ ಮೀಸಲಾತಿ ಜಾರಿಗೆ ಕಾಂಗ್ರೆಸ್ ಪಕ್ಷ ಕೂಡಾ ಬೆಂಬಲಿಸುತ್ತಿರುವುದರಿಂದ ಮಸೂದೆ ಜಾರಿಗಾಗಿ ಪ್ರಧಾನಿ ಮೋದಿ ಸರ್ಕಾರಕ್ಕೆ ಯಾವುದೇ ಅಡೆತಡೆಗಳಿಲ್ಲ ಎಂಬುದು ತಿಳಿದು ಬಂದಿದೆ.
Comments