ಸ್ವಚ್ಛ ಭಾರತ್ ಹೇ ಸೇವಾ ಅಭಿಯಾನಕ್ಕೆ ಸಾಥ್ ನೀಡಿದ ರಜನಿ

ಸೂಪರ್ ಸ್ಟಾರ್ ರಜಿನಿ ಕಾಂತ್ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ್ ಹೇ ಸೇವಾ ಅಭಿಯಾನವನ್ನು, ಸ್ವಚ್ಛತಾ ಕಾರ್ಯ ದೇವರ ಕಾರ್ಯ ಎಂದು ಮೋದಿಯ ಕಾರ್ಯವೈಖರಿಯ ಬಗ್ಗೆ ಟ್ವಿಟ್ ಮಾಡಿದ್ದಾರೆ. ಈ ಬಗ್ಗೆ ರಜನಿಕಾಂತ್ ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ಉಹಾ -ಪೋಹಾಗಳು ಸೃಷ್ಟಿಯಾಗಿದೆ .
ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ್ ಹೇ ಸೇವಾ ಅಭಿಯಾನಕ್ಕೆ ನನ್ನ ಬೆಂಬಲವಿದೆ, ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ. ರಜನಿಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಹಲವು ದಿನಗಳಿಂದ ಸುದ್ದಿಗಳು ಹರಿದಾಡುತ್ತಿವೆ. ಇದೀಗ ರಜನಿ ಮೋದಿ ಬೆಂಬಲಿಸಿ ಮಾಡಿರುವ ಟ್ವೀಟ್ ಗೆ ಮತ್ತಷ್ಟು ರೆಕ್ಕೆ ಪುಕ್ಕಗಳನ್ನು ಸೃಷ್ಟಿಸಿದೆ. ಈ ವಾರದ ಆರಂಭದಲ್ಲಿ ಪ್ರಧಾನಿ ಮೋದಿ, ಎಲ್ಲಾ ಜನಪ್ರಿಯ ವ್ಯಕ್ತಿಗಳಿಗೆ ಪತ್ರ ಬರೆದು ತಮ್ಮ ಬೆಂಬಲ ಸೂಚಿಸುವಂತೆ ಕೋರಿದ್ದರು. ಇದಕ್ಕೆ ರಜನಿಕಾಂತ್ ತಮ್ಮ ಬೆಂಬಲ ಸೂಚಿಸಿದ್ದಾರೆ.
Comments