ಬಿಬಿಎಂಪಿ ಮೈತ್ರಿಯಲ್ಲಿ ಜೆಡಿಎಸ್ ನ ಪಾತ್ರ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮುಂದುರಿಯಲಿದೆ.
ತೀವ್ರ ಕುತೂಹಲ ಮೂಡಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಆಯ್ಕೆ ಕೊನೆ ಹಂತಕ್ಕೆ ಬಂದು ತಲುಪಿದ್ದು, ಮೇಯರ್ ಹಾಗೂ ಉಪಮೇಯರ್ ಆಯ್ಕೆ ವಿಷಯದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಜೆಡಿಎಸ್ ವರಿಷ್ಠ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೇವೆ. ಮೇಯರ್ ಕಾಂಗ್ರೆಸ್‌ಗೆ ಹಾಗೂ ಉಪಮೇಯರ್ ಜೆಡಿಎಸ್ ಗೆ ಎಂಬುದು ತೀರ್ಮಾನವಾಗಿದೆ ಎಂದು ಶುಕ್ರವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ನಾಲ್ಕು ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನಗಳನ್ನು ಜೆಡಿಎಸ್ ನವರು ಕೇಳಿದ್ದಾರೆ. ಮೇಯರ್ ಸ್ಥಾನಕ್ಕೆ ನಮ್ಮ ಪಕ್ಷದಲ್ಲಿ ನಾಲ್ಕು ಜನ ಆಕಾಂಕ್ಷಿಗಳಿದ್ದಾರೆ.
ಯಾರನ್ನು ಆಯ್ಕೆ ಮಾಡಬೇಕು ಹಾಗೂ ಜೆಡಿಎಸ್ ನವರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷರ ಜತೆ ಸಮಾಲೋಚನೆ ನಡೆಸಿದ ಬಳಿಕ ಅಂತಿಮಗೊಳಿಸಲಿದ್ದೇವೆ' ಎಂದು ಹೇಳಿದರು.
Comments