ನಾಡದೇವತೆ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಪತ್ನಿ
ಮೈಸೂರು: ನವರಾತ್ರಿ 9 ದಿನಗಳು ಕಾಲ ನಾಡ ಅಧಿದೇವತೆ ಚಾಮುಂಡಿ ತಾಯಿಗೆ ಸಿಎಂ ಪತ್ನಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ನಾಲ್ಕನೇ ದಿನವಾದ ಇಂದು ಚಾಮುಂಡಿ ತಾಯಿಯ ಭಕ್ತೆಯಾಗಿರುವ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮೊದಲ ದಿನ ಚಾಮುಂಡಿ ಬೆಟ್ಟದಲ್ಲಿ ಸಿಎಂ ಸಿದ್ದರಾಮಯ್ಯ ಆಗಮಿಸುವ ಮೊದಲೇ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಇಂದು ಸಿಎಂ ಪತ್ನಿ ಸಿಎಂ ಅವರ ಮೈಸೂರಿನ ಖಾಸಗಿ ಆಪ್ತ ಕಾರ್ಯದರ್ಶಿ ಕುಮಾರ್ ಜತೆಯಲ್ಲಿದ್ದರು.
ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಸುಮಾರು 1 ಗಂಟೆಗೂ ಹೆಚ್ಚು ಕಾಲ ಪತಿ ಸಿದ್ದರಾಮಯ್ಯ ಹೆಸರಿನಲ್ಲಿವಿಶೇಷ ಪೂಜೆ ಸಲ್ಲಿಸಿದ್ದಾರೆ.ಪ್ರತಿ ದಿನ ಬೆಳಿಗ್ಗೆ ಬಂದು ಚಾಮುಂಡಿ ತಾಯಿ ಸನ್ನಿಧಿಯಲ್ಲಿ ನವರಾತ್ರಿಯ ಪೂಜೆ ಸಲ್ಲಿಸುತ್ತಿದ್ದು, ಇಂದು ನಾಲ್ಕನೇ ದಿನವಾಗಿದ್ದು, 9 ದಿನಗಳ ಕಾಲ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಮುಂದಿನ ಬಾರಿ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ನವರಾತ್ರಿಯ ಪೂಜೆ ಕೈಗೊಂಡಿದ್ದಾರೆ ಎಂದು ಆಪ್ತ ಮೂಲಗಳು ಖಚಿತಪಡಿಸಿವೆ.
Comments