ತೆರದಾಳ ಕ್ಷೇತ್ರದಿಂದ ಸ್ಪರ್ಧೆ, ಅಂತಿಮವಲ್ಲ - ಬಿಎಸ್ ವೈ
ಬೆಂಗಳೂರು: ನಾನು ಬಾಗಲಕೋಟೆ ಜಿಲ್ಲೆಯ ತೇರದಾಳ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬ ವಿಚಾರದಲ್ಲಿ ಯಾವುದೇ ಸತ್ಯಾಂಶವಿಲ್ಲ, ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬುದು ಇನ್ನು ಅಂತಿಮವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದರು.

ಅವರು ಉತ್ತರಕರ್ನಾಟಕದ ಭಾಗದ ತೇರದಾಳ ಕ್ಷೇತ್ರವನ್ನು ಅಂತಿಮಗೊಳಿಸಿದ್ದು, ಸಚಿವೆ ಕಾಂಗ್ರೆಸ್ ನಾಯಕಿ ಉಮಾಶ್ರಿ ಅವರ ವಿರುದ್ಧ ಸ್ಪರ್ಧೆ ನಡೆಸಲಿದ್ದಾರೆ ಎಂದು ವರದಿ ಪ್ರಸಾರವಾಗಿತ್ತು. ಆದ್ರೆ ಈ ಬಗ್ಗೆ ಸುದ್ದಿಗಾರರ ಜತೆ ಮಾತನಾಡಿರುವ ಬಿಎಸ್ ವೈ ನೀವು ರಾಜಕೀಯವಾಗಿ ಬೆಳೆದ ಕ್ಷೇತ್ರವನ್ನು ಯಾಕೆ ಬಿಡ್ತೀರಿ ಎಂದು ಶಿಕಾರಿಪುರದ ಜನ ನನ್ನ ಪ್ರಶ್ನಿಸುತ್ತಿದ್ದಾರೆ ಎಂದು ಹೇಳಿದರು. ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬುದರ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ ಆದರೆ ತೇರದಾಳ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂಬುದು ಸತ್ಯಕ್ಕೆ ದೂರವಾದ ವಿಚಾರ ಎಂದರು.
Comments