ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈರವರಿಂದ ಹೊಸ ರಾಜಕೀಯ ಪಕ್ಷದ ಶಂಕುಸ್ಥಾಪನೆ

ಅನುಪಮಾ ಶೆಣೈರವರು ಹೊಸ ಪಕ್ಷ ಕಟ್ಟುವ ಬಗ್ಗೆ ತಮ್ಮ ಜೊತೆಗಿನ ಸಮಾನ ಮನಸ್ಕರ ಜೊತೆ ಸೇರಿಕೊಂಡು ಒಂದು ಸುತ್ತಿನ ಮಾತುಕತೆ ಮಾಡಿದ್ದೇನೆ. ಒಂದು ತಿಂಗಳೊಳಗೆ ಅಭಿಪ್ರಾಯಗಳನ್ನು ಪಡೆದುಕೊಂಡು ಒಂದು ನಿರ್ಧಾರಕ್ಕೆ ಬರುತ್ತೇನೆ ಅಂತಾ ಅವರು ಹೇಳಿದ್ದಾರೆ.
ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ಹೊಸ ರಾಜಕೀಯ ಪಕ್ಷವನ್ನು ಕಟ್ಟುವ ಘೋಷಣೆಯನ್ನು ಮಾಡಿದ್ದಾರೆ. ಈ ಬಗ್ಗೆ ಖಾಸಗಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿರುವ ಅವರು ಭಷ್ಟ ರಾಜಕೀಯ ವ್ಯವಸ್ಥೆಯ ಒಳಗೆ ಹೊಕ್ಕಿ ಪೊಲೀಸಿಂಗ್ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದೇ ವೇಳೆ ಅವರು ಮಾಧ್ಯಮಕ್ಕೆ ನೀಡಿರುವ ಹೇಳಿಕೆಯಲ್ಲಿ ಕೆಲವು ಸೀಟುಗಳು ಚುನಾವಣೆಯಲ್ಲಿ ಬಂದರೆ ಯಾರಿಗೆ ಬೆಂಬಲಿಸುತ್ತೇವೆಂದು ಆಮೇಲೆ ಹೇಳುತ್ತೇವೆ ಎಂದರು. ಎಲ್ಲಾ ಅಂದುಕೊಂಡಂತೆ ಆದ್ರೆ ಬಳ್ಳಾರಿಯಿಂದಲೇ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ. ಅಲ್ಲೇ ನನಗೆ ಹೆಚ್ಚು ಜನರ ಬೆಂಬಲವಿದೆ ಎಂದು ಹೇಳಿದ್ದಾರೆ.
Comments