30 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ ಮೋದಿ ದೇವಾಲಯ

100 ಅಡಿ ಎತ್ತರದ ಪ್ರತಿಮೆ ಹಾಗೂ 30 ಕೋಟಿ ವೆಚ್ಚದಲ್ಲಿ ಮೋದಿ ದೇವಾಲಯ ನಿರ್ಮಾಣ ಮಾಡಲಾಗುವುದು ಎಂದು ಮೋದಿ ಅವರ ಅಭಿಮಾನಿಯಾಗಿರುವ ಜೆ.ಪಿ ಸಿಂಗ್ ತಿಳಿಸಿದ್ದಾರೆ. ನೀರಾವರಿ ಇಲಾಖೆಯಲ್ಲಿ ಎಂಜಿನಿಯರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸಿಂಗ್ ಮೋದಿ ದೇವಾಲಯ ಹಾಗೂ ಪ್ರತಿಮೆಯನ್ನು ಮೀರತ್ನ ಸಾರ್ಧಾ ಪ್ರದೇಶದಲ್ಲಿ ನಿರ್ಮಿಸಲು ಮುಂದಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ 100 ಅಡಿ ಎತ್ತರದ ಪ್ರತಿಮೆ ಹಾಗೂ 30 ಕೋಟಿ ವೆಚ್ಚದಲ್ಲಿ ಮೋದಿ ದೇವಾಲಯ ನಿರ್ಮಾಣ ಮಾಡಲಾಗುವುದು ಎಂದು ಮೋದಿ ಅವರ ಅಭಿಮಾನಿಯಾಗಿರುವ ಜೆ.ಪಿ ಸಿಂಗ್ ತಿಳಿಸಿದ್ದಾರೆ. ಇದೇ ತಿಂಗಳ 23ರಂದು ದೇವಾಲಯ ಮತ್ತು ಪ್ರತಿಮೆ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಅಮಿತ್ ಷಾ ಪಾಲ್ಗೊಳ್ಳಲಿದ್ದಾರೆ' ಎಂದು ಸಿಂಗ್ ಮಾಹಿತಿ ನೀಡಿದ್ದಾರೆ.ದೇವಾಲಯ ಮತ್ತು ಪ್ರತಿಮೆಯನ್ನು ಎರಡು ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಸಿಂಗ್ ತಿಳಿಸಿದ್ದಾರೆ.
Comments