ಮುಂಬರುವ ಚುನವಾಣೆಯಲ್ಲಿ ಜಯಗಳಿಸಬೇಕಾದರೆ ಗುಂಡಿಗಳನ್ನು ಮುಚ್ಚಿ: ಕೆ.ಸಿ ವೇಣುಗೋಪಾಲ್

ರಾಜ್ಯ ವಿಧಾನ ಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಗುಂಡಿಗಳನ್ನು ಕೂಡಲೇ ಸರಿಪಡಿಸುವಂತೆ ಸರ್ಕಾರಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಕ್ರಮಕೈಗೊಳ್ಳಲು ಸಿಎಂ ಸಭೆ ಕರೆದಿದ್ದಾರೆ. ರಾಜ ಕಾಲುವೆಗಳ ಒತ್ತುವರಿ, ಪ್ರವಾಹ ನಿಯಂತ್ರಣ ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು ತಿಳಿದು ಬಂದಿದೆ.
ಸಿಎಂ ಹಾಗೂ ಸಚಿವರೊಂದಿಗಿನ ಸಭೆಯಲ್ಲಿ ಮಾತನಾಡಿದ ವೇಣುಗೋಪಾಲ್ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ಶೀಘ್ರವೇ ಮುಗಿಸುವಂತೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಸೂಚಿಸಿದ್ದಾರೆ.ಬೆಂಗಳೂರಿಗೆ ಸಂಬಂಧಿಸಿದ ಸಮಸ್ಯೆಗಳನ್ನ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ ಇಂದು ಸಭೆ ಕರೆದಿದ್ದಾರೆ. ನಗರದಲ್ಲಿ ಉಂಟಾಗುತ್ತಿರುವ ಸಮಸ್ಯೆಗಳು ಸಿದ್ದರಾಮಯ್ಯ ಸರ್ಕಾರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಹೀಗಾಗಿ ಬೆಂಗಳೂರಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಸಲಹೆ ನೀಡಿದ್ದಾರೆ.
ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಲ್ಲಿ ಬೆಂಗಳೂರು ನಗರದಲ್ಲೇ 28 ಕ್ಷೇತ್ರಗಳಿವೆ. ಹೀಗಾಗಿ ಸಿಎಂ ಮತ್ತು ಸಚಿವರುಗಳು ಕೂಡಲೇ ತಮ್ಮ ಕೆಲಸ ಆರಂಭಿಸಬೇಕೆಂದು ಹೇಳಿದ್ದಾರೆ. ಜೊತೆಗೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕೆಂದು ಅವರು ಸೂಚಿಸಿದ್ದಾರೆ.
ಇನ್ನೂ ವೇಣುಗೋಪಾಲ್ ಅವರ ಸೂಚನೆಯಂತೆ ಸಿಎಂ ಸಿದ್ದರಾಮಯ್ಯ ಸಭೆ ಕರೆದಿದ್ದು ನಗರದ ಸಮಸ್ಯೆಗಳ ಕುರಿತು ಚರ್ಚಿಸಲಿದ್ದಾರೆ, ಸಭೆಯಲ್ಲಿ ನಗರದ ಸಚಿವರು ಶಾಸಕರು ಸೇರಿದಂತೆ ಬಿಬಿಎಂಪಿ, ಬಿಡಿಎಸ ಬಿಡಬ್ಲ್ಯೂ ಎಸ್ ಎಸ್ ಬಿ ಮತ್ತು ಬೆಸ್ಕಾಂ ನ ಉನ್ನತ ಅಧಿಕಾರಿಗಳು ಭಾಗವಹಿಸುವಂತೆ ಸೂಚಿಸಲಾಗಿದೆ. ರಾಜ ಕಾಲುವೆಗಳ ಒತ್ತುವರಿ, ಪ್ರವಾಹ ನಿಯಂತ್ರಣ ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು.
Comments