ಬಿಜೆಪಿ ನಾಯಕರಿಗೆ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಸಿಎಂ ಎಚ್ಚರಿಕೆ

ಶಾಂತಾ ಇಂಡಸ್ಟ್ರೀಸ್‍ಗೆ ಜಮೀನು ಮಂಜೂರಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಪಷ್ಟನೆ ನೀಡಿರುವ ಸಿ.ಎಂ ಸಿದ್ದರಾಮಯ್ಯ ಅವರು ಸುಳ್ಳು ಆರೋಪ ಮಾಡಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಬಿ.ಜೆ. ಪುಟ್ಟಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡುವುದಾಗಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
ಅವರು ಇಂದು ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತ ಇಂದು ಜೆಪಿ ವಿಧಾನ ಪರಿಷತ್ ಸದಸ್ಯ ಬಿ.ಜೆ. ಪುಟ್ಟಸ್ವಾಮಿ ಮಾಡಿರುವ ಆರೋಪಗಳಿಗೆ ಸ ಸಂಬಂಧಪಟ್ಟಂತೆ ಮಾತನಾಡಿ, ತಮ್ಮ ಪುತ್ರ ಡಾ. ಯತೀಂದ್ರ ವಿರುದ್ಧ ಬಿಜೆಪಿ ಮಾಡಿರುವ ಆರೋಪ ಆಧಾರ ರಹಿತ ಹಾಗೂ ಸಂಪೂರ್ಣ ರಾಜಕೀಯ ಪ್ರೇರಿತ ಸುಳ್ಳು ಆರೋಪ ಮಾಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಬಿ.ಜೆ. ಪುಟ್ಟಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡುವಂತೆ ಪುತ್ರನಿಗೆ ಸೂಚಿಸುವುದಾಗಿ ಸಿದ್ದರಾಮಯ್ಯ ಹೇಳಿದರು. ವಿಧಾನಸಭೆಗೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಈ ರೀತಿಯ ಆಧಾರ ರಹಿತ ಆರೋಪಗಳನ್ನು ಮಾಡಲು ಶುರು ಮಾಡಿದೆ ಎಂದು ವಾಗ್ದಾಳಿ ನಡೆಸಿದರು. ಇದೇ ವೇಳೆ ಅವರು ಶಾಂತಾ ಇಂಡಸ್ಟ್ರೀಸ್‍ಗೆ ಜಮೀನು ಮಂಜೂರಾಗಿರುವ ಪ್ರಕರಣಕ್ಕೂ ತಮ್ಮ ಪುತ್ರನಿಗೂ ಯಾವ ಸಂಬಂಧ ಕೂಡ ಇಲ್ಲ. ಆಧಾರರಹಿತ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಬಿಜೆಪಿ ಹುಡುಗಾಟವಾಡುತ್ತಿದೆ. ಮೊನ್ನೆ ಶೋಭಾ ಕರಂದ್ಲಾಜೆ ಸುಳ್ಳು ಆರೋಪ ಮಾಡಿದ್ದಾರೆ. ಈಗ ಪುಟ್ಟಸ್ವಾಮಿ ಅಂತಾ ಲೇವಡಿ ಮಾಡಿದರು.
Comments