ವಿಧವಾ ವಿವಾಹಕ್ಕೆ 2 ಲಕ್ಷ ರೂಪಾಯಿ ಘೋಷಣೆ ಮಾಡಿದ ಮಧ್ಯಪ್ರದೇಶ ಸರ್ಕಾರ

08 Oct 2017 1:53 PM | Politics
492 Report

ಭೋಪಾಲ್ : 45ಕ್ಕೂ ಕಡಿಮೆ ವಯಸ್ಸಿನ ವಿಧವೆಯ ಪುನರುವಿವಾಹಕ್ಕೆ 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ. ವಿವಾಹವಾಗುವ ಹುಡುಗನಿಗೆ 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ ಸಿಗಲಿದೆ.

ಭೋಪಾಲ್ : 45ಕ್ಕೂ ಕಡಿಮೆ ವಯಸ್ಸಿನ ವಿಧವೆಯ ಪುನರುವಿವಾಹಕ್ಕೆ 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ. ವಿವಾಹವಾಗುವ ಹುಡುಗನಿಗೆ 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ ಸಿಗಲಿದೆ. ಇದು ದೇಶದಲ್ಲಿಯೇ ಮೊದಲ ಪ್ರಯತ್ನವಾಗಿದ್ದು, ಈ ಯೋಜನೆ ಅನುಷ್ಠಾನಗೊಂಡ ಬಳಿಕ ಪ್ರತಿ ವರ್ಷ ಒಂದು ಸಾವಿರ ವಿಧವೆಯರ ಬಾಳು ಬೆಳಗಲಿದೆ ಎಂದು ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ.

ವಿಧವಾ ಪುನರ್ ವಿವಾಹ ಪ್ರೋತ್ಸಾಹಿಸುವ ನೀತಿಯನ್ನು ರಚಿಸುವಂತೆ ಜುಲೈ ತಿಂಗಳಲ್ಲಿ ಸುಪ್ರಿಂ ಕೋರ್ಟ್ ಕೇಂದ್ರ ಸರ್ಕಾರವನ್ನು
ಕೇಳಿ ಕೊಂಡಿದ್ದು, ಮಧ್ಯಪ್ರದೇಶ ಸರ್ಕಾರ ಇಂಥದ್ದೊಂದು ಯೋಜನೆ ಜಾರಿಗೊಳಿಸಲು ಮುಂದಾಗುತ್ತಿದೆ. ಈ ಯೋಜನೆ ಅನುಷ್ಠಾನದಿಂದ ಮಧ್ಯ ಪ್ರದೇಶ ಸರ್ಕಾರಕ್ಕೆ ಪ್ರತಿವರ್ಷ 20 ಕೋಟಿ ರೂಪಾಯಿ ಹೊರೆಯಾಗಲಿದೆ. ಕರಡು ಪ್ರತಿ ಪ್ರಕಾರ ನೀಡಲಾಗುತ್ತದೆ. ಈ ಯೋಜನೆಯ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳುಹಿಸಲು ಸಿದ್ಧವಾಗಿದ್ದು, ನಂತರ ಅದನ್ನು ಕ್ಯಾಬಿನೆಟ್ ನಲ್ಲಿ ಮಂಡಿಸಲಾಗುತ್ತದೆ.

ವಿಧವಾ ಪುನರ್ ವಿವಾಹಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಚಿಸುವಂತೆ ಜುಲೈ ತಿಂಗಳಲ್ಲಿ ಸುಪ್ರಿಂ ಕೋರ್ಟ್ ಕೇಂದ್ರ ಸರ್ಕಾರ ವನ್ನು ಕೇಳಿ ಕೊಂಡಿದ್ದು, ಮಧ್ಯ ಪ್ರದೇಶ ಸರ್ಕಾರ ಇಂಥದ್ದೊಂದು ಯೋಜನೆ ಜಾರಿಗೊಳಿಸಲು ಮುಂದಾಗುತ್ತಿದೆ. ಈ ಯೋಜನೆ
ಅನುಷ್ಠಾನದಿಂದ ಮಧ್ಯ ಪ್ರದೇಶ ಸರ್ಕಾರಕ್ಕೆ ಪ್ರತಿವರ್ಷ 20 ಕೋಟಿ ರೂಪಾಯಿ ಹೊರೆಯಾಗಲಿದೆ.

 

Edited By

venki swamy

Reported By

Sudha Ujja

Comments