ಗುಂಡಿ ಮುಚ್ಚಲು 15 ದಿನದ ಗಡುವು ನೀಡಿರುವ ಸಿಎಂ
ರಾಜ್ಯ ಸರ್ಕಾರ ಹದಿನೈದು ದಿನಗಳಲ್ಲಿ ನಗರದ ರಸ್ತೆ ಗುಂಡಿಗಳ ಮುಚ್ಚದಿದ್ದರೆ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸಿಲಿಕಾನ್ ಸಿಟಿ ಖ್ಯಾತಿಯ ರಾಜ್ಯ ರಾಜಧಾನಿ ಬೆಂಗಳೂರಿಗೆ ಈ ಹಿಂದೆ ಕಸದ ನಗರ ಎನ್ನುವ ಹೆಸರುಕೂಡ ಕೇಳಿ ಬಂದಿತ್ತು. ಆದರೆ ಈಗ ಕಳೆದ ಒಂದು ವಾರದಿಂದ ನಗರದ ರಸ್ತೆಗಳಲ್ಲಿ ಉಂಟಾಗಿರುವ ಹಳ್ಳಗಳಿಂದ ವಾಹನ ಸವಾರರಿಗೆ ತಲೆ ನೋವಾಗಿ ಪರಿಣಮಿಸಿದ್ದು ಹಳ್ಳಕ್ಕೆ ಬಿದ್ದು ಸಾವನ್ನಪ್ಪುವ ಸಂಖ್ಯೆ ಹೆಚ್ಚಾಗಿದ್ದು ಕಿಲ್ಲರ್ ಸಿಟಿ ಎನ್ನುವ ಹಣೆ ಪಟ್ಟಿ ಬಂದರೆ ಹೆಚ್ಚು ಆಶ್ಚರ್ಯ ಪಡಬೇಕಾಗಿಲ್ಲ.
ಈ ಬಗ್ಗೆ ಎಚ್ಚರ ಗೊಂಡಿರುವ ರಾಜ್ಯ ಸರ್ಕಾರ ಹದಿನೈದು ದಿನಗಳಲ್ಲಿ ನಗರದ ರಸ್ತೆ ಗುಂಡಿಗಳ ಮುಚ್ಚದಿದ್ದರೆ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಅವರು ಇಂದು ವಿಧಾನಸೌಧದ ಮಾಧ್ಯಮಗಳೊಂದಿಗೆ ಮಾತನಾಡಿದರು. ಇದೇ ವೇಳೆ ಅವರು ಕೆಲವು ದಿನಗಳಿಂದ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿವೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದು ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
Comments