ಪೆಟ್ರೋಲ್-ಡೀಸೆಲ್ ತೆರಿಗೆ ದರ ಇಳಿಕೆಯನ್ನು ಪರೋಕ್ಷವಾಗಿ ನಿರಾಕರಿಸಿದ ಸಿಎಂ

ಬೆಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ , ಬೇರೆ ರಾಜ್ಯಗಳಿಗಿಂತಲೂ ನಮ್ಮ ರಾಜ್ಯದಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ದರ ಕಡಿಮೆ ಇದೆ. ಅದರ ಮೇಲ್ಪಟ್ಟೂ ತೆರಿಗೆ ಕಡಿಮೆ ಮಾಡಬೇಕಾದರೆ ಕೇಂದ್ರ ಸರ್ಕಾರವೇ ಮಾಡಲಿ ಎಂದು ಹೇಳಿದರು.
ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲೂ ನಮ್ಮ ರಾಜ್ಯದಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ದರ ಕಡಿಮೆ ಇದೆ ಎಂದು ಹೇಳುವ ಮೂಲಕ ಅದರ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪರೋಕ್ಷವಾಗಿ ನಿರಾಕರಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೇರೆ ರಾಜ್ಯಗಳಿಗಿಂತಲೂ ನಮ್ಮ ರಾಜ್ಯದಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ದರ ಕಡಿಮೆ ಇದೆ. ಅದರ ಮೇಲ್ಪಟ್ಟೂ ತೆರಿಗೆ ಕಡಿಮೆ ಮಾಡಬೇಕಾದರೆ ಕೇಂದ್ರ ಸರ್ಕಾರವೇ ಮಾಡಲಿ ಎಂದು ಹೇಳಿದರು.
ಇತ್ತೀಚೆಗೆ ಕೇಂದ್ರ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡಿತ್ತು. ಅದರ ಬೆನ್ನಲ್ಲೇ ರಾಜ್ಯ ಸರ್ಕಾರಗಳೂ ಕೂಡ ತಮ್ಮ ಪಾಲಿನ ತೆರಿಗೆಯಲ್ಲೂ ಇಳಿಕೆ ಮಾಡಬೇಕೆಂದು ಸಲಹೆ ನೀಡಿತ್ತು. ಅದನ್ನು ಅನುಸರಿಸಿ ಗುಜರಾತ್, ಮಧ್ಯಪ್ರದೇಶ ಸೇರಿದಂತೆ ಬಿಜೆಪಿ ಮತ್ತು ಅದರ ಅಂಗ ಪಕ್ಷಗಳ ಆಡಳಿತ ಇರುವ ರಾಜ್ಯ ಸರ್ಕಾರಗಳು ತೆರಿಗೆ ಕಡಿಮೆ ಮಾಡಿದ್ದವು. ಆದರೆ, ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರದ ಪ್ರಸ್ತಾವವನ್ನು ತಿರಸ್ಕರಿಸಿದ್ದು, ತೆರಿಗೆ ಇಳಿಸಲು ನಿರಾಕರಿಸಿದೆ.
Comments