ಪ್ರಧಾನಿ ಮೋದಿ ವಿರುದ್ಧ ಬೇಗ್ ಅವಾಚ್ಯ ಬೈಗುಳ
ಪುಲಕೇಶಿ ನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ತಮಿಳು ಭಾಷೆಯಲ್ಲಿ ಮಾತನಾಡಿದ ಸಚಿವ ಬೇಗ್ ನೋಟು ಅಪನಗದೀಕರಣ ವಿಚಾರದ ಕುರಿತು ವಾಗ್ದಾಳಿ ನಡೆಸುವ ವೇಳೆ ಉತ್ಸಾಹದ ಭರದಲ್ಲಿ ತೀರಾ ಕೀಳು ಶಬ್ಧ ಪ್ರಯೋಗಿಸಿದ್ದಾರೆ. ಈ ವೇಳೆ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು ಶಿಳ್ಳೆ, ಚಪ್ಪಾಳೆ ಹೊಡೆದಿದ್ದಾರೆ.
ಬಹಿರಂಗ ಸಭೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಶಬ್ಧ ಬಳಸಿ ಸಚಿವ ರೋಷನ್ ಬೇಗ್ ಅವರು ಹೊಸದೊಂದು ವಿವಾದ ಹುಟ್ಟು ಹಾಕಿದ್ದಾರೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಬೇಗ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು,.ಇಲ್ಲವಾದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇವೆ ಎಂದು ಬಿಜೆಪಿ ಗುಡುಗಿದೆ. ಕಾರ್ಯಕ್ರಮದ ವಿಡಿಯೋ ಚಿತ್ರೀಕರಣವಾಗಿದೆ. ಸಿದ್ದರಾಮಯ್ಯ ಅವರ ಅಭಿವೃದ್ಧಿ ಕಾರ್ಯಗಳನ್ನು ಹೊಗಳುತ್ತಾ 'ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿದ್ದರು ಆಗ ಶೋಭಾ ಮುಖ ನೋಡುತ್ತಾ ನಿಂತಿದ್ದರು' ಎಂದು ವೈಯಕ್ತಿಕ ಟೀಕೆ ಮಾಡಿದ್ದಾರೆ. ಈ ಬಗ್ಗೆ ಬಿಜೆಪಿ ಮುಖಂಡರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಎಂದು ಕಿಡಿ ಕಾರಿದ್ದಾರೆ.
Comments