ಪ್ರಧಾನಿ ಮೋದಿಗೆ ಕ್ಷಮೆ ಕೋರಿದ ಸಚಿವ ರೋಷನ್ ಬೇಗ್
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿ ವಿವಾದದಲ್ಲಿ ಸಿಲುಕಿರುವ ಹಿನ್ನೆಲೆಯಲ್ಲಿ ವಕ್ಫ್ ಸಚಿವ ರೋಷನ್ ಬೇಗ್ ಇದೀಗ ಟ್ವೀಟರ್ ಮೂಲಕ ಕ್ಷಮೆಯಾಚಿಸಿದ್ದಾರೆ. ಆಸಂವಿಧಾನಿಕ ಪದ ಬಳಕೆ ಮಾಡಿದ ವಿಡಿಯೋ ವೈರಲ್ ಆಗಿ ಎಲ್ಲೆಡೆ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ಸಚಿವ ಬೇಗ್ ತಮ್ಮ ಟ್ವೀಟರ್ ಖಾತೆಯ ಪುಟದಲ್ಲಿ ಕ್ಷಮೆ ಯಾಚಿಸಿದ್ದಾರೆ.
ನನ್ನ ಪದ ಬಳಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಬರೆದುಕೊಂಡಿದ್ದಾರೆ. ಪುಲಕೇಶಿ ನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ತಮಿಳು ಭಾಷೆಯಲ್ಲಿ ಮಾತನಾಡಿದ ಸಚಿವ ಬೇಗ್ ನೋಟು ಅಪನಗದೀಕರಣ ವಿಚಾರದ ಕುರಿತು ವಾಗ್ದಾಳಿ ನಡೆಸುವ ವೇಳೆ ಉತ್ಸಾಹದ ಭರದಲ್ಲಿ ತೀರಾ ಕೀಳು ಶಬ್ಧ ಪ್ರಯೋಗಿಸಿದ್ದಾರೆ. ಈ ವೇಳೆ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು ಶಿಳ್ಳೆ, ಚಪ್ಪಾಳೆ ಹೊಡೆದಿದ್ದರು ಆದರೆ ಇದೀಗ ರೋಷನ್ ಬೇಗ್ ಇದೀಗ ಟ್ವೀಟರ್ ಮೂಲಕ ಕ್ಷಮೆಯಾಚಿಸಿದ್ದಾರೆ.
Comments