ಜಾರ್ಜ್ ಒಬ್ಬ ಅಯೋಗ್ಯ ಸಚಿವ ಎಂದು ಬಿ ಎಸ್ ವೈ ಆಕ್ರೋಶ

ಮಳೆ ಅನಾಹುತದಿಂದ ಐದು ಅಮಾಯಕರು ಪ್ರಾಣ ಕಳೆದುಕೊಳ್ಳಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹರಿಹಾಯ್ದಿದ್ದಾರೆ. ಬೆಂಗಳೂರಿನ ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲದ ಕೆ.ಜೆ.ಜಾರ್ಜ್ ಅವರಂತಹ ಅಯೋಗ್ಯನನ್ನು ಬೆಂಗಳೂರು ಸಚಿವರಾಗಿ ನೇಮಕ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಳೆ ಅನಾಹುತದಿಂದ ಐದು ಅಮಾಯಕರು ಪ್ರಾಣ ಕಳೆದುಕೊಳ್ಳಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹರಿಹಾಯ್ದಿದ್ದಾರೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಮಾಜಿ ಡಿಸಿಎಂ ಆರ್.ಅಶೋಕ್ ಅವರೊಂದಿಗೆ ಮಳೆ ನೀರಿನಲ್ಲಿ ಅರ್ಚಕ ವಾಸುದೇವ್ ಕೊಚ್ಚಿ ಹೋದ ಪ್ರದೇಶಕ್ಕೆ ಭೇಟಿ ನೀಡಿ ಅವರ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿ ಅವರು ಮಾತನಾಡಿದರು.
ಈಗಾಗಲೇ ಹಲವಾರು ಅಮಾಯಕ ಜೀವಗಳು ಮಳೆಗೆ ಆಹುತಿಯಾಗಿವೆ. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ತಮ್ಮ ಧೋರಣೆಯನ್ನು ಬದಲಿಸಿಲ್ಲ. ಬೆಂಗಳೂರಿನ ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲದ ಕೆ.ಜೆ.ಜಾರ್ಜ್ ಅವರಂತಹ ಅಯೋಗ್ಯನನ್ನು ಬೆಂಗಳೂರು ಸಚಿವರಾಗಿ ನೇಮಕ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಲಾದರೂ ನಿದ್ದೆ ಬಿಟ್ಟು ಎದ್ದು ಬಂದು ಜನರ ಕಣ್ಣೀರು ಒರೆಸಲಿ ಎಂದು ಬಿಎಸ್‍ವೈ ಆಗ್ರಹಿಸಿದರು. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಆರ್.ಅಶೋಕ್ ಸ್ಥಳದಲ್ಲೇ ಮೃತ ಅರ್ಚಕ ಕುಟುಂಬಕ್ಕೆ ಪರಿಹಾರ ವಿತರಿಸಿದರು.
Comments