ಶಾಸಕರಿಗೆ ಚಿನ್ನದ ಬಿಸ್ಕೆಟ್, ಸಿಬ್ಬಂದಿಗಳಿಗೆ ಬೆಳ್ಳಿತಟ್ಟೆ ನೀಡುವ ಬಗ್ಗೆ ಪ್ರಸ್ತಾಪವಿಲ್ಲ, ಕೆ.ಬಿ ಕೋಳಿವಾಡ

ಬೆಂಗಳೂರು, ಸ್ಪೀಕರ್ ಕಚೇರಿ ಹಾಗೂ ಸರ್ಕಾರದ ತಿಕ್ಕಾಟದ ನಡುವೆ ವಿಧಾನಸೌಧ ವಜ್ರಮಹೋತ್ಸವದಲ್ಲಿ ಸವಿನೆನಪಿಗಾಗಿ ಶಾಸಕರಿಗೆ ತಲಾ 5, 000 ಮೌಲ್ಯದ ಬೆಳ್ಳಿ ತಟ್ಟೆ ಉಡುಗೊರೆ ಆಗಿ ನೀಡಲು ಯಾವುದೇ ಪ್ರಸ್ತಾಪವಿಲ್ಲ ಎಂದು ಸ್ಪೀಕರ್ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು, ಸ್ಪೀಕರ್ ಕಚೇರಿ ಹಾಗೂ ಸರ್ಕಾರದ ತಿಕ್ಕಾಟದ ನಡುವೆ ವಿಧಾನಸೌಧ ವಜ್ರಮಹೋತ್ಸವದಲ್ಲಿ ಸವಿನೆನಪಿಗಾಗಿ
ಶಾಸಕರಿಗೆ ತಲಾ 5, 000 ಮೌಲ್ಯದ ಬೆಳ್ಳಿ ತಟ್ಟೆ ಉಡುಗೊರೆ ಆಗಿ ನೀಡಲು ಯಾವುದೇ ಪ್ರಸ್ತಾಪವಿಲ್ಲ ಎಂದು ಸ್ಪೀಕರ್ ಸ್ಪಷ್ಟನೆ ನೀಡಿದ್ದಾರೆ.ಈ ಕುರಿತು ಖಾಸಗಿ ಸುದ್ದಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ವಿಧಾನಸಭೆ ಸಭಾಧ್ಯಕ್ಷ ಕೋಳಿವಾಡ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಶಾಸಕರಿಗೆ ಚಿನ್ನದ ಬಿಸ್ಕೆತ್ , ಸಿಬ್ಬಂದಿಗೆ ಬೆಳ್ಳಿ ತಟ್ಟೆ ನೀಡುವ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ ಎಂದು ಹೇಳಿದ್ದಾರೆ. ವಿಧಾನಮಂಡಲದ ಉಭಯ ಸದನಗಳ 300 ಸದಸ್ಯರಿಗೆ ವಿಧಾನಸೌಧ ಲಾಂಛನ ಒಳಗೊಂಡಿರುವ ಚಿನ್ನದ ಬಿಸ್ಕೆತ್ ಗಳನ್ನು ಕೊಡಲು ಚಿಂತಿಸಲಾಗುತ್ತಿದೆ, ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟದ ರಾಜಭವನ ಮತ್ತು ವಿಶ್ವೇಶ್ವರಯ್ಯ ಗೋಪುರದಲ್ಲಿ ಕೆಲಸ ಮಾಡುವ ಸುಮಾರು ಐದು ಸಾವಿರ ಸಿಬ್ಬಂದಿಗಳಿಗೆ ಬೆಳ್ಳಿ ತಟ್ಟೆಗಳನ್ನು ನೀಡಲಾಗುತ್ತದೆ ಎಂದು ವರದಿಯಾಗಿತ್ತು.
Comments