ಸಿದ್ದರಾಮಯ್ಯ ಹಿಂದೆ ಬಿಜೆಪಿ ಸೇರಲು ಯತ್ನಿಸಿದ್ದರು : ಎಚ್ ಡಿಕೆ ವಾಗ್ದಾಳಿ

ಸಿಎಂ ಸಿದ್ದರಾಮಯ್ಯ ಜೆಡಿಎಸ್ ತೊರೆದ ನಂತರ ಕಾಂಗ್ರೆಸ್ ಸೇರುವ ಬದಲು ಬಿಜೆಪಿಗೆ ಸೇರುವ ಪ್ರಯತ್ನ ನಡೆಸಿದ್ದರು ಎಂಬ ಅಂಶವನ್ನು ಕುಮಾರಸ್ವಾಮಿ ಬಹಿರಂಗಪಡಿಸಿದರು. ಬಿಜೆಪಿ ವರಿಷ್ಠರ ಜತೆ ಮಾತುಕತೆಯೂ ನಡೆದಿತ್ತು. ಕೊನೆ ಗಳಿಗೆಯಲ್ಲಿ ಕಾಂಗ್ರೆಸ್'ಗೆ ಹೋದರು ಎಂದರು.
ಸಿದ್ದರಾಮಯ್ಯ ಇದೀಗ ದುರಹಂಕಾರದ ಮಾತುಗಳನ್ನಾಡುತ್ತಿದ್ದು, ದುಡ್ಡಿನ ಮದ ಏರಿದೆ. ಅವರಿಗೆ ಪೊಲೀಸ್ ಜೀಪ್ಗಳಲ್ಲಿ ಹಣ ಸಾಗಿಸುವುದು ಕರಗತವಾಗಿದೆ. ಚಾಮುಂಡೇಶ್ವರಿ ಕ್ಷೇತ್ರದಿಂದ ಜಿ.ಟಿ.ದೇವೇಗೌಡ ಮತ್ತು ಹುಣಸೂರಿನ ಕ್ಷೇತ್ರದಿಂದ ಎಚ್.ವಿಶ್ವನಾಥ್ ಅವರು ಸ್ಪರ್ಧಿಸುತ್ತಾರೆ. ಮುಖ್ಯಮಂತ್ರಿಗಳು ಬರಲಿ ನೋಡೋಣ ಎಂದು ಸವಾಲು ಹಾಕಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸದಿದ್ದರೆ ಸಿದ್ದರಾಮಯ್ಯ ಅವರು ಕಾಂಗ್ರೆಸ್ಗೆ ಹೋಗುತ್ತಿರಲಿಲ್ಲ. ಅಲ್ಲಿ ಪ್ರತಿಪಕ್ಷದ ನಾಯಕರೂ ಆಗುತ್ತಿರಲಿಲ್ಲ ಎಂದರು.
Comments