ರಂಗಕರ್ಮಿ ಪ್ರಸನ್ನ ಉಪವಾಸ ಸತ್ಯಾಗ್ರಹಕ್ಕೆ ದೇವೇಗೌಡರ ಸಾಥ್

ಕೈ ಮಗ್ಗ ಉತ್ಪನ್ನಗಳ ಮೇಲೆ ಜಿಎಸ್ ಟಿ ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಸನ್ನ ರವರಿಗೆ ಈ ಹೋರಾಟದಲ್ಲಿ ನಾನು ಕೈ ಜೋಡಿಸುತ್ತೇನೆ ಎಂದು ಎಚ್ ಡಿ ದೇವೇಗೌಡರು ಹೇಳಿದ್ದಾರೆ. ಬಸವನಗುಡಿಯ ನಿಡುಮಾಮಿಡಿ ಮಠದಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಭೇಟಿ ನೀಡಿದ ಎಚ್ ಡಿಡಿ ಉಪವಾಸ ಸತ್ಯಾಗ್ರಹವನ್ನು ಕೈ ಬಿಡಲು ಮನವಿ ಮಾಡಿದ್ದಾರೆ.
ಕೈ ಮಗ್ಗ ಉತ್ಪನ್ನಗಳ ಮೇಲೆ ಜಿಎಸ್ ಟಿ ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಸನ್ನ ರವರಿಗೆ ಈ ಹೋರಾಟದಲ್ಲಿ ನಾನು ಕೈ ಜೋಡಿಸುತ್ತೇನೆ ಎಂದು ಎಚ್ ಡಿ ದೇವೇಗೌಡರು ಹೇಳಿದ್ದಾರೆ. ಜಿಎಸ್ ಟಿಯಿಂದ ಆಗುವ ಅನಾಹುತಗಳನ್ನು ಕೇಂದ್ರ ಯೋಚಿಸಬೇಕು.ಕೈ ಉತ್ಪನ್ನಗಳನ್ನ ತೆರಿಗೆ ಮುಕ್ತಗೊಳಿಸಬೇಕು ಅನ್ನೋ ನಿಟ್ಟಿನಲ್ಲಿ ಪ್ರಸನ್ನ ಅವರು ಕಳೆದ 5 ದಿನಗಳಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಜಿಎಸ್‍ಟಿಗೆ ವಿರೋಧ ವ್ಯಕ್ತಪಡಿಸಲೇಬೇಕು. ಇಂದು ಜಿಎಸ್‍ಟಿ ಎಲ್ಲರಿಗೂ ಸಮಾನ ತೆರಿಗೆ. ಯಾವ ಒಂದು ದೊಡ್ಡ ದೃಷ್ಟಿಕೋನದಿಂದ ಮಾಡಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತಿಲ್ಲ ಅಂತ ಖಾಸಗಿ ಮಾಧ್ಯಮಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು ಮಾಹಿತಿ ನೀಡಿದ್ದಾರೆ. ಪ್ರಧಾನಿಯವರನ್ನು ಭೇಟಿ ಮಾಡಿ ಈ ವಿಚಾರ ಗಮನಕ್ಕೆ ತರುವುದಾಗಿ ಎಚ್ ಡಿ ದೇವೇಗೌಡರು ಹೇಳಿದ್ದಾರೆ. ಬಸವನಗುಡಿಯ ನಿಡುಮಾಮಿಡಿ ಮಠದಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಭೇಟಿ ನೀಡಿದ ಎಚ್ ಡಿಡಿ ಉಪವಾಸ ಸತ್ಯಾಗ್ರಹವನ್ನು ಕೈ ಬಿಡಲು ಮನವಿ ಮಾಡಿದ್ದಾರೆ.
Comments