ವಿಧಾನಸಭಾ ಚುನಾವಣೆಯ ಬಗ್ಗೆ ಅನಿತಾ ಕುಮಾರಸ್ವಾಮಿ ಹೇಳಿದ್ದೇನು?

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ವಿಚಾರ, ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯಾಧ್ಯಕ್ಷರ ನಿರ್ಧಾರಕ್ಕೆ ನಾನು ಬದ್ದ ಎಂದು ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ಎಲ್ಲಾ ಕುತೂಹಲ ಗಳಿಗೆ ತೆರೆ ಬೀಳಲಿದೆ ಎಂದರು. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ಚಾಮಿ ಅತಿ ವೇಗವಾಗಿ ಚೇತರಿಸಿಕೊಳ್ಳುತ್ತಿದ್ದು, ನವೆಂಬರ್ ೩ ರಿಂದ ಮೈಸೂರಿನಿಂದಲೇ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ ಎಂದರು.
ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಕೆಲ ದಿನಗಳ ಕಾಲ ಪುತ್ರ ನಿಖಿಲ್ , ತಂದೆ ಹಾಗೂ ಜೆಡಿಎಸ್ ಪಕ್ಷದ ಪರ ರಾಜ್ಯ ವ್ಯಾಪಿ ಪ್ರವಾಸ ಮಾಡಲಿದ್ದಾರೆ ಎಂದು ಹೇಳಿದರು.
ಪ್ರತಿವರ್ಷ ನಾನು ಮತ್ತು ಕುಮಾರಸ್ವಾಮಿ ಹಾಸನಾಂಬೆ ದರ್ಶನ ಕ್ಕೆ ಆಗಮಿಸಿ ಪೂಜೆ ಸಲ್ಲಿಸುತ್ತಿದ್ದೆವು. ಆದರೆ ಅವರು ಚೇತರಿಸಿಕೊಳ್ಳುತ್ತಿರುವುದರಿಂದ ಬರಲಾಗಿಲ್ಲ. ಹೆಚ್ಡಿಕೆ ಮತ್ತು ನಾಡಿನ ಜನರು, ರೈತರಿಗೆ ಒಳ್ಳೆಯದಾಗಲಿ ಎಂದು ದೇವಿಯಲ್ಲಿ ಬೇಡಿಕೊಂಡಿದ್ದೇನೆ ಎಂದರು.
Comments