ಖುದ್ದು ಗುಂಡಿ ಮುಚ್ಚಿದ ಜಾರ್ಜ್

ಬೆಂಗಳೂರು: ಕಳೆದ ಮೂರು ದಿನಗಳಿಂದ ಮಳೆ ಬಿಡುವು ನೀಡಿರುವುದರಿಂದ ಬಿಬಿಎಂಪಿ ಅಧಿಕಾರಿಗಳು ಸಮರೋಪಾದಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಆರಂಭಿಸಿದ್ದು, ಶುಕ್ರವಾರ ಮಧ್ಯರಾತ್ರಿ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ನಗರದ ಹಲವು ಪ್ರದೇಶಗಳಿಗೆ ತೆರಳಿದ್ರು.
ಬೆಂಗಳೂರು: ಕಳೆದ ಮೂರು ದಿನಗಳಿಂದ ಮಳೆ ಬಿಡುವು ನೀಡಿರುವುದರಿಂದ ಬಿಬಿಎಂಪಿ ಅಧಿಕಾರಿಗಳು ಸಮರೋಪಾದಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಆರಂಭಿಸಿದ್ದು, ಶುಕ್ರವಾರ ಮಧ್ಯರಾತ್ರಿ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ನಗರದ ಹಲವು ಪ್ರದೇಶಗಳಿಗೆ ತೆರಳಿದ್ರು. ಅಲ್ಲಿ ಭೇಟಿ ನೀಡಿ ದುರಸ್ತಿ ಕಾಮಗಾರಿಯ ಗುಣಮಟ್ಟ ಪರಿಶೀಲನೆ ಮಾಡಿದ್ರು. ಇದೇ ವೇಳೆ ಆಯುಕ್ತ ಮಂಜುನಾಥ್ ಪ್ರಸಾದ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಶುಕ್ರವಾರ ಮಧ್ಯರಾತ್ರಿ 2 ಗಂಟೆಗೆ ಚಾಲುಕ್ಯ ವೃತ್ತದಿಂದ ಪರಿಶೀಲನೆ ಆರಂಭಿಸಿದರು. ಸುಮಾರು 200ಕ್ಕೂ ಹೆಚ್ಚು ಗುಂಡಿಗಳನ್ನು ಖುದ್ದು ಸ್ಥಳದಲ್ಲಿದ್ದು ಮುಚ್ಚಿಸಿದ ಅವರು ಗುಣಮಟ್ಟ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಬಿಇಎಲ್ ರಸ್ತೆಯಲ್ಲಿರುವ ಪೈಥಾನ್ ಯಂತ್ರದಿಂದ ಗುಂಡಿ ಮುಚ್ಚುವ ಕಾರ್ಯವನ್ನು ಪರಿಶೀಲಿಸಿದರು. ನಂತರ ಹೆಬ್ಬಾಳ
ಮೇಲ್ಸುತುವೆಯನ್ನು ಸೃಷ್ಟಿಯಾಗಿರುವ ರಸ್ತೆಗುಂಡಿಗಳನ್ನು ಆದ್ಯತೆಯ ಮೇರೆಗೆ ಸ್ಥಳದಲ್ಲಿಯೇ ನಿಂತು ಮುಚ್ಚಿಸಿದ ಸಚಿವರು , ರಸ್ತೆಗುಂಡಿಗೆ ಕೇವಲ ಡಾಂಬರು ಹಾಕಿ ಮುಚ್ಚದೆ ವೈಜ್ಞಾನಿಕವಾಗಿ ಗುಂಡಿ ತೆಗೆದು ಮುಚ್ಚುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
Comments