ಆಸ್ಪತ್ರೆಯಿಂದ ಬಿಎಸ್ ವೈ ಡಿಸ್ಚಾರ್ಜ್
ಎರಡು ದಿನ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆದಿದ್ದ ಯಡಿಯೂರಪ್ಪ ಆರೋಗ್ಯದಲ್ಲಿ ಚೇತರಿಕೆ ಕಂಡಬಂದ ಕಾರಣ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಸತತ ಪ್ರವಾಸದಿಂದಾಗಿ ಬಿಎಸ್‍ವೈ ಬಳಲಿದ್ದಾರೆ. ಅವರಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ ಎಂದು ವೈದ್ಯರು ಖಚಿತಪಡಿಸಿದ ಹಿನ್ನೆಲೆಯಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.
ತೀವ್ರ ಜ್ವರ ಮತ್ತು ಕಫದಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಸಾಗರ್ ಆಸ್ಪತ್ರೆಗೆ ಯಡಿಯೂರಪ್ಪ ಅವರನ್ನು ನಾಲ್ಕು ದಿನಗಳ ಹಿಂದೆ ದಾಖಲಿಸಲಾಗಿತ್ತು. ಸತತ ಪ್ರವಾಸದಿಂದಾಗಿ ಕಫ ಮತ್ತು ತೀವ್ರ ಜ್ವರ ಕಾಣಿಸಿಕೊಂಡಿದೆ.ಕೂಡಲೇ ಅವರನ್ನು ವೈದ್ಯರ ಸೂಚನೆಯಂತೆ ಸಾಗರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Comments