ಅಂಬರೀಶ್ ವಿರುದ್ಧವೇ ಘೋಷಣೆ ಕೂಗಿದ ಕೈ ಕಾರ್ಯಕರ್ತರು
ಮಂಡ್ಯ : ಮನೆಗೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದ ಸಂದರ್ಭದಲ್ಲಿ ನಟ, ಮಾಜಿ ಸಚಿವ ಶಾಸಕ ಅಂಬರೀಶ್ ವಿರುದ್ಧವೇ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂಡ್ಯ : ಮನೆಗೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದ ಸಂದರ್ಭದಲ್ಲಿ ನಟ, ಮಾಜಿ ಸಚಿವ ಶಾಸಕ ಅಂಬರೀಶ್ ವಿರುದ್ಧವೇ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರೆ , ಮತ್ತೊಂದೆಡೆ ಬೆಂಗಳೂರಿನ ಹೆಬ್ಬಾಳದಲ್ಲಿ ಮೊಹಲಾ ಕ್ಲಿನಿಕ್ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ , ಸಚಿವ ರಮೇಶ್ ಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಕೈಕೈ ಮಿಲಾಯಿಸಿದ ಘಟನೆ ಸೋಮವಾರ ನಡೆದಿದೆ.
ಮಂಡ್ಯದ ಕೆರೆಗೋಡು ಗ್ರಾಮದಲ್ಲಿ ಮನೆ, ಮನೆಗೆ ಕಾಂಗ್ರೆಸ್ ಕಾರ್ಯಕ್ರಮದ ವೇಳೆ ಅಂಬರೀಶ್ ಅವರು ಒಂದೇ ಮನೆಗೆ ಭೇಟಿ ನೀಡಿದ್ದರಿಂದ ಸಿಟ್ಟಿಗೆದ್ದ ಕಾಂಗ್ರೆಸ್ ಕಾರ್ಯಕರ್ತರು ಅಂಬರೀಶ್ ವಿರುದ್ಧವೇ ಘೋಷಣೆ ಕೂಗಿದ ಘಟನೆ ವರದಿಯಾಗಿದೆ.
Comments