ಅಂಬಿ ವಿರುದ್ಧ ಅಭಿಮಾನಿಗಳಿಂದ ಧಿಕ್ಕಾರದ ಕೂಗು

ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಸಚಿವ ಅಂಬರೀಶ್ ತಮ್ಮ ಮನೆಗೆ ಬಂದಿಲ್ಲವೆಂದು ಪಕ್ಷದ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಡ್ಯ ತಾಲ್ಲೂಕಿನ ಕೆರೆಗೋಡು ಗ್ರಾಮದಲ್ಲಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅಂಬರೀಶ್ ಕೂಡ ಭಾಗವಹಿಸಿದ್ದಾರೆ.
ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಸಚಿವ ಅಂಬರೀಶ್ ತಮ್ಮ ಮನೆಗೆ ಬಂದಿಲ್ಲವೆಂದು ಪಕ್ಷದ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂಡ್ಯ ತಾಲ್ಲೂಕಿನ ಕೆರೆಗೋಡು ಗ್ರಾಮದಲ್ಲಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅಂಬರೀಶ್ ಕೂಡ ಭಾಗವಹಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಒಂದಿಬ್ಬರು ಮುಖಂಡರ ಮನೆಗಳಿಗೆ ಭೇಟಿ ನೀಡಿ ಅಲ್ಲಿಂದ ತೆರಳಿದ್ದಾರೆ. ತಮ್ಮ ಮನೆಗೂ ಅಂಬರೀಶ್ ಭೇಟಿ ನೀಡಲಿದ್ದಾರೆ ಎಂದು ಕಾದಿದ್ದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಧಿಕ್ಕಾರ ಕೂಗುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.
Comments