ಕಾಂಗ್ರೆಸ್ ನ 15 ಹಾಲಿ ಶಾಸಕರಿಗೆ ಟಿಕೆಟ್ ಸಿಗೋದು ಡೌಟ್?
ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ಕೆ.ಸಿ. ವೇಣುಗೋಪಾಲ್ ಬಂದ ಬಳಿಕ ಆಡಳಿತ ಪಕ್ಷ ಕಾಂಗ್ರೆಸ್ ಹೊಸ ಹುಮ್ಮಸ್ಸಿನಲ್ಲಿದ್ದು, ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಕೈಗೊಂಡಿದೆ. ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸಿ ಪಕ್ಷದತ್ತ ಜನರನ್ನು ಸೆಳೆಯಲಾಗುತ್ತಿದೆ. ಈಗಾಗಲೇ ಪ್ರತಿ ವಿಧಾನಸಭೆ ಕ್ಷೇತ್ರಗಳಲ್ಲಿ ಮಾಹಿತಿ ಸಂಗ್ರಹಿಸಿ ಆಯ್ದ 100 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಸಿದ್ಧಪಡಿಸಿದೆ.
ಮುಂದಿನ ವಿಧಾನಸಭೆ ಚುನಾವಣೆಗೆ ಈಗಾಗಲೇ ಕಾಂಗ್ರೆಸ್, ಬಿ.ಜೆ.ಪಿ. ಹಾಗೂ ಜೆ.ಡಿ.ಎಸ್. ತಯಾರಿ ನಡೆಸಿವೆ. ಗೆಲುವಿಗೆ ಬೇಕಾದ ಎಲ್ಲಾ ತಂತ್ರಗಳನ್ನು ರೂಪಿಸಿವೆ.ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ಕೆ.ಸಿ. ವೇಣುಗೋಪಾಲ್ ಬಂದ ಬಳಿಕ ಆಡಳಿತ ಪಕ್ಷ ಕಾಂಗ್ರೆಸ್ ಹೊಸ ಹುಮ್ಮಸ್ಸಿನಲ್ಲಿದ್ದು, ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಕೈಗೊಂಡಿದೆ.
ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸಿ ಪಕ್ಷದತ್ತ ಜನರನ್ನು ಸೆಳೆಯಲಾಗುತ್ತಿದೆ. ಈಗಾಗಲೇ ಪ್ರತಿ ವಿಧಾನಸಭೆ ಕ್ಷೇತ್ರಗಳಲ್ಲಿ ಮಾಹಿತಿ ಸಂಗ್ರಹಿಸಿ ಆಯ್ದ 100 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಸಿದ್ಧಪಡಿಸಿದೆ. ಕೆ.ಸಿ. ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ಸಭೆ ನಡೆಸಿ 100 ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಈ ಪಟ್ಟಿಯನ್ನು ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಸಲ್ಲಿಸಲಾಗಿದೆ. 2018 ರ ವಿಧಾನಸಭೆ ಚುನಾವಣೆಗೆ 100 ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಇದರಲ್ಲಿ 15 ಹಾಲಿ ಶಾಸಕರ ಹೆಸರಿನ ಮುಂದೆ ಬದಲಿ ಹೆಸರು ಸೇರಿಸಲಾಗಿದೆ. ಈ 15 ಶಾಸಕರಿಗೆ ಟಿಕೆಟ್ ಸಿಗುವುದು ಡೌಟ್ ಎನ್ನಲಾಗ್ತಿದೆ.
Comments