ವಜ್ರಮಹೋತ್ಸವದ ಸಿದ್ಧತೆ : ಝಗಮಗಿಸುತ್ತಿರುವ ವಿಧಾನ ಸೌಧ

ಇದೇ 25 ರಂದು ವಜ್ರಮಹೋತ್ಸವದ ಸಂಭ್ರಮದಲ್ಲಿರುವ ವಿಧಾನಸೌಧ ಬಣ್ಣ ಬಣ್ಣದ ದೀಪಗಳಿಂದ ಅಲಂಕೃತಗೊಂಡು ಸಂಭ್ರಮಕ್ಕೆ ಸಿದ್ಧತೆಗಳು ನಡೆಯುತ್ತಿವೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಮಾರಂಭವನ್ನು ಉದ್ಘಾಟಿಸಿ ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ.
ರಾಜ್ಯದ ಶಕ್ತಿಕೇಂದ್ರವೇ ಆಗಿರುವ ವಿಧಾನ ಸೌಧದ ಸಂಭ್ರಮಕ್ಕೆ ರಾಷ್ಟ್ರಪತಿಯಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ರಾಮನಾಥ್ ಕೋವಿಂದ್ ಅವರ ಕರ್ನಾಟಕಕ್ಕೆ ಆಗಮಿಸುತ್ತಿರುವುದು ಇನ್ನೊಂದು ವಿಶೇಷ. ನಂತರ ರಾಷ್ಟ್ರಪತಿ ವಿಧಾನ ಪರಿಷತ್ ಸಭಾಂಗಣ ವೀಕ್ಷಿಸಲಿದ್ದು, ವಿಧಾನಸೌಧ ಹಾಗೂ ವಿಕಾಸಸೌಧದ ಮಧ್ಯೆ ಇರುವ ಗಾಂಧಿ ಪ್ರತಿಮೆ ಎದುರು ಉಭಯ ಸದನಗಳ ಶಾಸಕರು, ರಾಷ್ಟ್ರಪತಿ ಜತೆ ಫೋಟೊಗಳನ್ನು ತೆಗೆಸಿಕೊಳ್ಳಲಿದ್ದಾರೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮ, ಗೌರವಾರ್ಪಣೆ ನಡೆಯಲಿದೆ.
Comments