ಬೆಳೆ ಪರಿಹಾರಕ್ಕೆ ಗೌಡರು ರೈತರಿಗೆ ಕೊಟ್ಟ ಐಡಿಯಾ ಏನು ಗೊತ್ತೇ..?

ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡುವಂತೆ ಒತ್ತಾಯಿಸುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ನವಭಾರತವನ್ನಾದರೂ ನಿರ್ಮಿಸಲು, ಬೇರೆ ಏನಾದರೂ ಮಾಡಲಿ. ಮೊದಲು ಸಂಕಷ್ಟದಲ್ಲಿರುವ ರೈತರ ರಕ್ಷಣೆಗೆ ಸ್ಪಂದಿಸಲಿ ಎಂದು ಆಗ್ರಹಿಸಿದರು.
ಹಾನಿಗೀಡಾಗಿದ್ದ ಮೆಕ್ಕೆಜೋಳ ಬೆಳೆಯ ಸ್ಥಳ ಪರಿಶೀಲನೆಯನ್ನು ಕಳೆದ ಎರಡು ದಿನಗಳಿಂದ ಮಾಡಿದ್ದ ಗೌಡರು, ತಾವು ರೈತರ ಸಂಕಷ್ಟವನ್ನು ಖುದ್ದು ನೋಡಿರುವುದಾಗಿ ಹೇಳಿದರು. ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಅವರ ಪರಿಸ್ಥಿತಿ ಸುಧಾರಣೆಯಾಗಿಲ್ಲ. ಸಾಲದ ಸುಳಿಗೆ ಸಿಲುಕಿದ್ದಾರೆ. ಬೆಳೆದ ಬೆಳೆಗಳು ಒಣಗಿ ನಿಂತಿವೆ. ಇಂತಹ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಂಭೀರವಾಗಿ ಪರಿಗಣಿಸಿ ಸೂಕ್ತ ಪರಿಹಾರ ನೀಡಬೇಕೆಂದು ಹೇಳಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬೆಳೆ ಹಾನಿಗೆ ಕೂಡಲೇ ಪರಿಹಾರವನ್ನು ಘೋಷಣೆ ಮಾಡಬೇಕು. ಈ ಕೆಲಸ ಬಿಟ್ಟು ಉಭಯ ಸರ್ಕಾರಗಳು ಪರಸ್ಪರ ದೋಷಾರೋಪಣೆ ಮಾಡಿ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಬಾರದು. ಸರ್ಕಾರಗಳು ರೈತರಿಗೆ ಸ್ಪಂದಿಸಬೇಕು ಇಲ್ಲವಾದರೆ ರೈತರ ಪರವಾಗಿ ಬೀದಿಗಿಳಿದು ಹೋರಾಟ ಮಾಡಲು ನಾನು ಸಿದ್ಧವಿದ್ದೇನೆ ಎನ್ನುವ ಮೂಲಕ ರೈತರಿಗೆ ಎಚ್ ಡಿ ದೇವೇಗೌಡರು ಐಡಿಯಾ ಕೊಟ್ಟಿದ್ದಾರೆ. ರೈತರ ಪರವಾಗಿ ಬೀದಿಗಿಳಿದು ಹೋರಾಟ ಮಾಡಲು ಸಿದ್ಧವಿದ್ದು, ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದೆಂದು ಮನವಿ ಮಾಡಿದರು.
Comments