ರಾಜ್ಯೋತ್ಸವ ಪ್ರಶಸ್ತಿ ಸಾಧಕರ ಪಟ್ಟಿ ಅಂತಿಮ , ಸಚಿವೆ ಉಮಾಶ್ರೀ

ವಿಧಾನಸೌಧದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಂಬಂಧ ಉನ್ನತಮಟ್ಟದ ಸಮಿತಿ ಸಭೆ ಬಳಿಕ ಅವರು ಈ ವಿಷಯ ತಿಳಿಸಿದರು. ಈ ಬಾರಿ 62 ಸಾಧಕರಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. ಒಟ್ಟು 1750 ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಅದರಲ್ಲಿ 161 ಅರ್ಜಿಗಳನ್ನು ಅಂತಿಮ ಸುತ್ತಿಗೆ ಪರಿಗಣಿಸಲಾಗಿದೆ.
ವಿಧಾನಸೌಧದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಂಬಂಧ ಉನ್ನತಮಟ್ಟದ ಸಮಿತಿ ಸಭೆ ಬಳಿಕ ಅವರು ಈ ವಿಷಯ ತಿಳಿಸಿದರು. ಈ ಬಾರಿ 62 ಸಾಧಕರಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. ಒಟ್ಟು 1750 ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಅದರಲ್ಲಿ 161 ಅರ್ಜಿಗಳನ್ನು ಅಂತಿಮ ಸುತ್ತಿಗೆ ಪರಿಗಣಿಸಲಾಗಿದೆ. ಇದರಲ್ಲಿ 62 ಮಂದಿಯ ಪಟ್ಟಿ ಅಂತಿಮಗೊಳ್ಳಲಿದೆ ಎಂದರು.
ರಾಜ್ಯೋತ್ಸವ ಪ್ರಶಸ್ತಿ ಮೊತ್ತ ಹೆಚ್ಚಿಸುವ ವಿಚಾರ ಎಲ್ಲವೂ ಊಹಾಪೋಹ. ಅಂತಹ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಜೊತೆಗೆ ಚಿನ್ನದ ಪ್ರಮಾಣವನ್ನು ಹೆಚ್ಚಿಸುವ ಪ್ರಸ್ತಾವನೆಯೂ ಸರ್ಕಾರದ ಮುಂದಿಲ್ಲವೆಂದು ಸಚಿವೆ ಉಮಾಶ್ರೀ ಸ್ಪಷ್ಟಪಡಿಸಿದರು.
Comments