ದೇವೇಗೌಡರ ಹೆಸರು ಬಿಟ್ಟಿರುವುದರಲ್ಲಿ ನಮ್ಮ ಪಾತ್ರವೇ ಇಲ್ಲ : ಸಿಎಂ
ಭಾಷಣವನ್ನು ಸರ್ಕಾರ ಬರೆದುಕೊಟ್ಟು ಉದ್ದೇಶ ಪೂರ್ವಕವಾಗಿ ಟಿಪ್ಪು ಹೆಸರನ್ನು ಸೇರಿಸಿದೆ ಎಂಬ ಬಿಜೆಪಿ ನಾಯಕರ ಆರೋಪದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಕಿಡಿ ಕಾರಿದರು. ರಾಷ್ಟ್ರಪತಿ ಭಾಷಣದಲ್ಲಿ ದೇವೇಗೌಡರ ಹೆಸರು ಬಿಟ್ಟಿರುವುದರಲ್ಲಿ ನಮ್ಮ ಪಾತ್ರವಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ವಜ್ರಮಹೋತ್ಸವ ನಿಮಿತ್ತ ನಡೆದ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರ ಭಾಷಣ ಹೊಸ ತಿರುವು ನೀಡಿದೆ. ರಾಷ್ಟ್ರಪತಿಗಳು ಟಿಪ್ಪು ಸುಲ್ತಾನನ್ನು ಸ್ವಾತಂತ್ರ್ಯವೀರ ಎಂದು ಕೊಂಡಾಡಿ ಆತನ ಕೊಡುಗೆಗಳನ್ನು ಶ್ಲಾಘಿಸಿರುವುದು ಕಾಂಗ್ರೆಸ್ಗೆ ಇನ್ನಷ್ಟು ಉತ್ಸಾಹ ನೀಡಿದರೆ, ಬಿಜೆಪಿಗೆ ತೀವ್ರ ಇರಿಸು ಮುರಿಸು ಉಂಟಾಗಿ ಪೇಚಿಗೆ ಸಿಲುಕುವಂತೆ ಮಾಡಿದೆ. ಭಾಷಣವನ್ನು ಸರ್ಕಾರ ಬರೆದುಕೊಟ್ಟು ಉದ್ದೇಶ ಪೂರ್ವಕವಾಗಿ ಟಿಪ್ಪು ಹೆಸರನ್ನು ಸೇರಿಸಿದೆ ಎಂಬ ಬಿಜೆಪಿ ನಾಯಕರ ಆರೋಪದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಕಿಡಿ ಕಾರಿದರು. ಅಲ್ಲಾರೀ..ರಾಷ್ಟ್ರಪತಿಗಳಿಗೆ ನಾವು ಭಾಷಣ ಬರೆದುಕೊಡಕಾಗುತ್ತಾ? ಅವರೇ ಭಾಷಣ ಸಿದ್ಧಪಡಿಸಿಕೊಂಡು ಬಂದು ಓದಿದ್ದಾರೆ. ಅವರು ಇತಿಹಾಸದಲ್ಲಿ ನಡೆದ ಸತ್ಯವನ್ನೇ ಹೇಳಿದ್ದಾರೆ. ಬಿಜೆಪಿಯವರು ಇದನ್ನು ತಿರುಚುತ್ತಿದ್ದಾರೆ. ಅವರಿಗೆ ಸುಲಭವಾಗಿ ಅರ್ಥವಾಗಲ್ಲ,ಸರ್ಕಾರ ಭಾಷಣ ಬರೆದುಕೊಡಲು ಸಾಧ್ಯವಿಲ್ಲ.ಇದು ಜಂಟಿ ಅಧಿವೇಶನದ ಭಾಷಣ ಅಲ್ಲ, ಜಂಟಿ ಅಧಿವೇಶನಕ್ಕಾದರೆ ಸರ್ಕಾರ ಬರೆದುಕೊಡುತ್ತೆ' ಎಂದರು. 'ಬಿಜೆಪಿಯವರು ಈ ಬಗ್ಗೆ ಗೊಂದಲ ಸೃಷ್ಟಿಸುತ್ತಿರುವುದು, ಜನರಿಗೆ ತಪ್ಪು ಮಾಹಿತಿ ನೀಡಲು ಯತ್ನಿಸುತ್ತಿರುವುದು ಅತ್ಯಂತ ಖಂಡನೀಯ ಮತ್ತು ವಿಷಾದನೀಯ' ಎಂದು ಕಿಡಿಕಾರಿದರು. ರಾಷ್ಟ್ರಪತಿಗಳ ಭಾಷಣದ ವೇಳೆ ಮುಖ್ಯಮಂತ್ರಿಗಳ ಹೆಸರಿನಲ್ಲಿ ದೇವೇಗೌಡರ ಹೆಸರು ಬಿಟ್ಟ ಬಗ್ಗೆ ಕೇಳಿದಾಗ 'ಇದರಲ್ಲಿ ನಮ್ಮ ಪಾತ್ರವೇ ಇಲ್ಲ, ನಾನಾಗಲಿ, ನನ್ನ ಆಪ್ತರಾಗಲಿ,ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಲಿ ಭಾಷಣ ಬರೆದಿಲ್ಲ. ಅವರು ಉದ್ದೇಶ ಪೂರ್ವಕವಾಗಿ ಮರೆತಿರಲಿಕ್ಕಿಲ್ಲ' ಎಂದರು.
Comments