ಇಂದು ದರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆಯಲಿರುವ ಪ್ರಧಾನಿ ಮೋದಿ
ಬೆಂಗಳೂರು: ಪ್ರಧಾನಿ ಮೋದಿ ಇವತ್ತು ಧರ್ಮಸ್ಥಳ ಮಂಜುನಾಥ ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ಪ್ರಧಾನಿ ಬರುವಿಕೆ ಹಿನ್ನಲೆಯಲ್ಲಿ ಧರ್ಮಸ್ಥಳದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಬೆಂಗಳೂರು: ಪ್ರಧಾನಿ ಮೋದಿ ಇವತ್ತು ಧರ್ಮಸ್ಥಳ ಮಂಜುನಾಥ ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ಪ್ರಧಾನಿ ಬರುವಿಕೆ ಹಿನ್ನಲೆಯಲ್ಲಿ ಧರ್ಮಸ್ಥಳದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಧರ್ಮಸ್ಥಳದ ಮಂಜುನಾಥೇಶ್ವರ ದರ್ಶನ ಪಡೆಯಲಿರುವ ಮೋದಿ ಬಳಿಕ ಉಜಿರೆಯಲ್ಲಿ ಧರ್ಮಸ್ಥಳ ಗ್ರಾಮೀಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಮೂರು ದಿನಗಳ ವರೆಗೂ ರಾಜ್ಯ ಪ್ರವಾಸ ಕೈಗೊಂಡಿರುವ ಮೋದಿ ಧರ್ಮಸ್ಥಳ, ಬೆಂಗಳೂರು ಹಾಗೂ ಬೀದರ್ ನಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಆಮೇಲೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೌಂದರ್ಯಲಹರಿ ಪಾರಾಯಣ ಮಹಾಸಮರ್ಪಣೆ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ 6 ಗಂಟೆಗೆ ಬೀದರ್ ರೈಲು ನಿಲ್ದಾಣದಲ್ಲಿ ಬೀದರ್ -ಕಲಬುರಗಿ ಹೊಸ ರೈಲ್ವೆ ಮಾರ್ಗಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಸಂಜೆ 7.30ಕ್ಕೆ ಬೀದರ್ ನ ನೆಹರು ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಭೆ ಉದ್ಧೇಶಿಸಿ ಮಾತನಾಡಲಿದ್ದಾರೆ.
Comments