ದೇವೇಗೌಡರ ಕರೆಗೆ ಒಪ್ಪಿಗೆ ಸೂಚಿಸಿದ ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ
ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸದಲ್ಲಿ ಇಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ರವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಮಾತುಕತೆ ನಡೆಸಿದರು. ಇತ್ತೀಚೆಗಷ್ಟೆ ದೇವೇಗೌಡರು ಪಿ.ಜಿ.ಆರ್.ಸಿಂಧ್ಯಾ ನನ್ನ ಜೋತೆಗೆ ಇರಲಿದ್ದಾರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಿಂಧ್ಯಾವರನ್ನು ರಾಜಕೀಯದಲ್ಲಿ ಸಕ್ರಿಯಗೊಳ್ಳಲು ಸೂಚಿಸಿದ್ದರು.
ನಾಳೆ ಜೆಪಿ ಭವನದಲ್ಲಿ ನಡೆಯುವ ಪೂಜಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಹಾಗೂ ಸಕ್ರೀಯವಾಗಿ ಜೆಡಿಎಸ್ ಪಕ್ಷದ ಸಂಘಟನೆಯಲ್ಲಿ ಭಾಗಿಯಾಗುವಂತೆ ಗೌಡರು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಂಧ್ಯಾ ಅವರು ಇನ್ನು ಮುಂದೆ ಪಕ್ಷ ಸಂಘಟನೆಯಲ್ಲಿ ಭಾಗಿಯಾಗುವುದಾಗಿ ಹಾಗೂ ನಾಳೆಯ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಗೌಡರಿಗೆ ವಾಗ್ದಾನ ಮಾಡಿದರು.
Comments