ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ
ಅಭಿವೃದ್ಧಿ ಪರ ಇರುವವರು ಯಾರು ಮತ್ತು ಅಭಿವೃದ್ಧಿಯ ವಿರೋಧಿಗಳು ಯಾರು ಎಂಬುದು ಕರ್ನಾಟಕದ ಜನರಿಗೆ ತಿಳಿದಿದೆ ಕಾಂಗ್ರೆಸ್ ಪಕ್ಷಕ್ಕೆ ದುರಹಂಕಾರ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಅಧಿಕಾರ ಮುಖ್ಯವಾಗಿದೆಯೇ ಹೊರತು ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಜಾತ್ಯತೀತ ತತ್ವಗಳ ಮೇಲೆ ನಂಬಿಕೆ ಇಲ್ಲ ಎಂದು ತಿರುಗೇಟು ನೀಡಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಮೂರೂವರೆ ವರ್ಷದಲ್ಲಿ ಜನರಿಗೆ ಉಪಯೋಗವಾಗಬಲ್ಲ ಒಂದೇ ಒಂದು ಕಾರ್ಯಕ್ರಮ ಜಾರಿಗೆ ತಂದಿಲ್ಲ ಎಂದು ಆರೋಪಿಸಿದ್ದಾರೆ.ಅಭಿವೃದ್ಧಿ ಪರ ಇರುವವರು ಯಾರು ಮತ್ತು ಅಭಿವೃದ್ಧಿಯ ವಿರೋಧಿಗಳು ಯಾರು ಎಂಬುದು ಕರ್ನಾಟಕದ ಜನರಿಗೆ ತಿಳಿದಿದೆ ಕಾಂಗ್ರೆಸ್ ಪಕ್ಷಕ್ಕೆ ದುರಹಂಕಾರ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಅಧಿಕಾರ ಮುಖ್ಯವಾಗಿದೆಯೇ ಹೊರತು ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಜಾತ್ಯತೀತ ತತ್ವಗಳ ಮೇಲೆ ನಂಬಿಕೆ ಇಲ್ಲ ಎಂದು ತಿರುಗೇಟು ನೀಡಿದರು. ರೈತರ ಸಾಲಮನ್ನಾ ಮಾಡುವಲ್ಲಿ ಎನ್ ಡಿಎ ಸರ್ಕಾರ ವಿಫಲವಾಗಿದೆ.ರಾಜ್ಯ ಸರ್ಕಾರ ಜನರಿಗಾಗಿ ಅನ್ನ ಭಾಗ್ಯ, ಕ್ಷೀರ ಭಾಗ್ಯ ಸೇರಿದಂತೆ ಅನೇಕ ಉಪಯುಕ್ತ ಯೋಜನೆಗಳನ್ನು ಜಾರಿಗೆ ತಂದಿದೆ, ಆದರೆ ಬಿಜೆಪಿ ಯಾವ ಅಭಿವೃದ್ಧಿ ಕಾರ್ಯ ಮಾಡಿದೆ ಎಂದು ಪ್ರಶ್ನಿಸಿದ್ದಾರೆ.
Comments