ಗೌಡರ ಸಮ್ಮುಖದಲ್ಲಿ ಮತ್ತೆ ಸಿಂಧ್ಯಾ ಜೆಡಿಎಸ್‍ಗೆ ವಾಪಸ್

30 Oct 2017 2:15 PM | Politics
3144 Report

ಜೆಪಿ ಭವನದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಸಿಂಧ್ಯಾ ಸೇರ್ಪಡೆಗೊಂಡರು. ನಿನ್ನೆ ಗೌಡರ ಪದ್ಮನಾಭನಗರದ ನಿವಾಸದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಗೌಡರ ಸಮ್ಮುಖದಲ್ಲಿ ಮಾತುಕತೆ ನಡೆಸಿದ ಸಿಂಧ್ಯಾ ಅವರು ಪಕ್ಷಕ್ಕೆ ಮರಳುವ ಬಗ್ಗೆ ಸಮ್ಮತಿ ವ್ಯಕ್ತಪಡಿಸಿದ್ದರು.

ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಇಂದು ಮತ್ತೆ ತಮ್ಮ ಮಾತೃಪಕ್ಷ ಜೆಡಿಎಸ್‍ಗೆ ಮರಳಿದರು. ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಪೂಜಾ ಕಾರ್ಯಕ್ರಮದ ಸಂದರ್ಭದಲ್ಲಿ ಪಕ್ಷದ ವರಿಷ್ಠರ ಸಮ್ಮುಖದಲ್ಲಿ ಸೇರ್ಪಡೆಯಾದರು.ಮರಳಿ ಜೆಡಿಎಸ್‍ಗೆ ಸೇರ್ಪಡೆಯಾದ ಸಿಂಧ್ಯಾ ಅವರು ಇನ್ನು ಮುಂದೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವುದಾಗಿ ಪ್ರಕಟಿಸಿದರು. ಕೆಲವು ವರ್ಷಗಳಿಂದ ತಟಸ್ಥವಾಗಿದ್ದ ಸಿಂಧ್ಯಾ ಅವರು ರಾಜಕೀಯವಾಗಿ ದೂರ ಸರಿದಿದ್ದರು. ಯಾವುದೇ ಪಕ್ಷಕ್ಕೆ ಸೇರ್ಪಡಯಾಗದೆ ರಾಜಕೀಯೇತರ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

Edited By

Suresh M

Reported By

Shruthi G

Comments