ಮಂಡ್ಯದಿಂದ ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಸ್ಪರ್ಧೆ?

ಮುಂಬರುವ ಚುನಾವಣೆಯಲ್ಲಿ ಅಭಿಷೇಕ್ ಮಂಡ್ಯ ಕ್ಷೇತ್ರದಿಂದ ರಾಜಕೀಯಕ್ಕೆ ಬರುತ್ತಾರೆಂಬ ಸುದ್ದಿ ಕೆಲವು ಖಾಸಗಿ ವಾಹಿನಿಗಳಲ್ಲಿ ವರದಿಯಾಗುತ್ತಿದೆ.
ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ರಾಜಕೀಯಕ್ಕೆ ಬರುತ್ತಾರೋ, ಸಿನಿಮಾ ರಂಗಕ್ಕೆ ಬರುತ್ತಾರೋ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಅಂಬರೀಷ್ ಪುತ್ರ ರಾಜಕೀಯಕ್ಕೆ ಬರುವುದು ಪಕ್ಕಾ ಆಗಿದೆ ಎನ್ನಲಾಗಿದೆ. ಈಗಾಗಲೇ ಈ ಬಗ್ಗೆ ರಾಜ್ಯ ನಾಯಕರು ಮತ್ತು ಕಾಂಗ್ರೆಸ್ ಹೈಕಮಾಂಡ್ ಕೂಡಾ ಅಭಿಷೇಕ್ ಸ್ಪರ್ಧೆಗೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಪುತ್ರನ ಪರ ಅಂಬರೀಷ್ ಪ್ರಚಾರ ಮಾಡುತ್ತಾರೆ ಎಂದು ನಿರೀಕ್ಷಸಲಾಗಿದೆ. ಆದರೆ ಈ ಬಗ್ಗೆ ಇನ್ನೂ ಅಂಬರೀಷ್ ಕಡೆಯಿಂದ ಪ್ರತಿಕ್ರಿಯೆ ಬಂದಿಲ್ಲ.
Comments